ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಢಾಕಾ: ಹುಸಿ ಬಾಂಬ್‌ ಬೆದರಿಕೆ– ವಿಮಾನ ತುರ್ತು ಭೂಸ್ಪರ್ಶ

Last Updated 2 ಡಿಸೆಂಬರ್ 2021, 12:16 IST
ಅಕ್ಷರ ಗಾತ್ರ

ಢಾಕಾ: ಹುಸಿ ಬಾಂಬ್‌ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ 135 ಪ್ರಯಾಣಿಕರಿದ್ದ ಮಲೇಷ್ಯಾ ಏರ್‌ಲೈನ್ಸ್ ವಿಮಾನವು ಢಾಕಾ ವಿಮಾನ ನಿಲ್ದಾಣದಲ್ಲಿ ಬುಧವಾರ ರಾತ್ರಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ವಿಮಾನ ನಿಲ್ದಾಣದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ಕೌಲಾಲಂಪುರದಿಂದ ಢಾಕಾಗೆ ತೆರಳುತ್ತಿದ್ದ ಎಂಎಚ್‌–196 ವಿಮಾನದಲ್ಲಿ ಬಾಂಬ್‌ ಇಡಲಾಗಿದೆ ಎಂದು ಬೆದರಿಕೆ ಕರೆ ಬಂದಿತ್ತು. ಬುಧವಾರ ಸ್ಥಳೀಯ ಸಮಯ ರಾತ್ರಿ 9:38ಕ್ಕೆ ಹಜರತ್ ಶಹಜಲಾಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನವು ತುರ್ತು ಭೂಸ್ಪರ್ಶ ಮಾಡಿದೆ. ಇದು ಹುಸಿ ಬಾಂಬ್‌ ಬೆದರಿಕೆಯಾಗಿದೆ’ ಎಂದು ವಿಮಾನ ನಿಲ್ದಾಣದ ಕಾರ್ಯನಿರ್ವಾಹಕ ನಿರ್ದೇಶಕ ಗ್ರೂಪ್ ಕ್ಯಾಪ್ಟನ್ ಎ.ಎಚ್‌.ಎಂ ತೌಹಿದ್-ಉಲ್ ಅಹ್ಸಾನ್ ಸುದ್ದಿಗಾರರಿಗೆ ತಿಳಿಸಿದರು.

ವಿಮಾನ ನಿಲ್ದಾಣದಲ್ಲಿ ಭಾರಿ ಭದ್ರತೆ ಒದಗಿಸಲಾಗಿತ್ತು. ಎಲ್ಲ ಪ್ರಯಾಣಿಕರನ್ನು ಕೆಳಗಿಳಿಸಿ ವಿಮಾನ ಹಾಗೂ ಪ್ರಯಾಣಿಕರ ಲಗೇಜ್‌ಗಳ ತಪಾಸಣೆ ನಡೆಸಲಾಗಿದ್ದು, ಯಾವುದೇ ಬಾಂಬ್‌ ಅಥವಾ ಆ ರೀತಿಯ ವಸ್ತು ಪತ್ತೆಯಾಗಿಲ್ಲ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT