ಬುಧವಾರ, ಸೆಪ್ಟೆಂಬರ್ 28, 2022
27 °C

ಕಾಬೂಲ್ ಮಸೀದಿಯಲ್ಲಿ ಬಾಂಬ್ ಸ್ಫೋಟ; ಕನಿಷ್ಠ 20 ಸಾವು

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಕಾಬೂಲ್: ಅಫ್ಗಾನಿಸ್ತಾನದ ರಾಜಧಾನಿ ಕಾಬೂಲ್‌‌ನಲ್ಲಿ ಬುಧವಾರ ಸಂಜೆ ಪ್ರಾರ್ಥನೆಯ ವೇಳೆ ನಡೆದ ಬಾಂಬ್ ದಾಳಿಯಲ್ಲಿ ಕನಿಷ್ಠ 20 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಘಟನೆಯಲ್ಲಿ 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಈ ಕುರಿತು ಸುದ್ದಿಸಂಸ್ಥೆ 'ಎಎನ್‌ಐ' ಟ್ವೀಟ್ ಮಾಡಿದೆ.

ಯಾವುದೇ ಉಗ್ರ ಸಂಘಟನೆ ಈ ಬಾಂಬ್ ದಾಳಿ ಹಿಂದಿನ ಹೊಣೆ ವಹಿಸಿಕೊಂಡಿಲ್ಲ.

ಇದನ್ನೂ ಓದಿ: 

ಇದೊಂದು ಆತ್ಮಾಹುತಿ ದಾಳಿಯಾಗಿದೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ. ಘಟನೆಯಲ್ಲಿ ಮುಸ್ಲಿಂ ಧರ್ಮಗುರು ಮುಲ್ಲಾ ಅಮೀರ್ ಮೊಹಮ್ಮದ್ ಕಾಬೂಲಿ ಮೃತಪಟ್ಟಿದ್ದಾರೆ.

ಉತ್ತರ ಕಾಬೂಲ್‌ನ ಖೈರ್ ಖಾನಾ ಪ್ರದೇಶದಲ್ಲಿರುವ ಮಸೀದಿಯಲ್ಲಿ ಸಂಭವಿಸಿದ ಸ್ಫೋಟದ ತೀವ್ರತೆ ಎಷ್ಟಿತ್ತೆಂದರೆ ಹತ್ತಿರದ ಕಟ್ಟಡಗಳು ಹಾನಿಯಾಗಿವೆ.

ಅಫ್ಗಾನಿಸ್ತಾನದಲ್ಲಿ ಸಂಪೂರ್ಣ ನಿಯಂತ್ರಣ ಸಾಧಿಸಿದ್ದೇವೆ ಎಂದು ತಾಲಿಬಾನ್ ಹೇಳಿಕೊಳ್ಳುತ್ತಿದೆ. ಇನ್ನೊಂದೆಡೆ ನಾಗರಿಕರನ್ನು ಗುರಿಯಾಗಿಸಿ ಇಸ್ಲಾಮಿಕ್ ಸ್ಟೇಟ್ ನಿರಂತರ ದಾಳಿ ನಡೆಸುತ್ತಲೇ ಇದೆ ಎಂದು ವರದಿಯಾಗಿದೆ.

ಎರಡು ವಾರಗಳ ಹಿಂದೆಯಷ್ಟೇ ಕಾಬೂಲ್‌ನಲ್ಲಿ ನಡೆದ ಅವಳಿ ಬಾಂಬ್ ಸ್ಫೋಟದಲ್ಲಿ 10 ಮಂದಿ ಮೃತಪಟ್ಟಿದ್ದರು.

ಕಳೆದ ವರ್ಷ ಅಫ್ಗಾನಿಸ್ತಾನದಿಂದ ತನ್ನ ಸೇನೆಯನ್ನು ಅಮೆರಿಕ ಹಿಂತೆಗೆದುಕೊಂಡಿತ್ತು. ಈ ವೇಳೆ ತಾನಿಬಾನ್‌‌ಗಳು ಅಫ್ಗಾನಿಸ್ತಾನವನ್ನು ವಶಕ್ಕೆ ತೆಗೆದುಕೊಂಡಿದ್ದರು.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು