ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕಿಸ್ತಾನ: ಶಿಯಾ ಮೆರವಣಿಗೆ ಮೇಲೆ ದಾಳಿ– 3 ಸಾವು

Last Updated 19 ಆಗಸ್ಟ್ 2021, 15:05 IST
ಅಕ್ಷರ ಗಾತ್ರ

ಮುಲ್ತಾನ್‌ (ಪಾಕಿಸ್ತಾನ): ಪಾಕಿಸ್ತಾನದಪೂರ್ವ ಪಂಜಾಬ್ ಪ್ರಾಂತ್ಯದ ಬಹವಾಲ್‌ ನಗರದಲ್ಲಿ ಗುರುವಾರ ಶಿಯಾ ಮುಸ್ಲಿಮರು ಮೆರವಣಿಗೆ ನಡೆಸುತ್ತಿದ್ದ ವೇಳೆ ರಸ್ತೆ ಬದಿಯಲ್ಲಿ ಇಟ್ಟಿದ್ದ ಬಾಂಬೊಂದು ಸ್ಫೋಟಿಸಿ 3 ಮಂದಿ ಮೃತಪಟ್ಟಿದ್ದು, 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಬಾಂಬ್‌ ಸ್ಫೋಟಗೊಂಡ ಸ್ಥಳಕ್ಕೆ ಪೊಲೀಸರು ಮತ್ತು ಆಂಬುಲೆನ್ಸ್‌ ದೌಡಾಯಿಸುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಗಾಯಗೊಂಡ ಜನರು ರಸ್ತೆ ಬದಿಯಲ್ಲಿ ಸಹಾಯಕ್ಕಾಗಿ ಅಂಗಲಾಚುತ್ತಿರುವ ದೃಶ್ಯವೂ ವಿಡಿಯೊದಲ್ಲಿದೆ.

ಶಿಯಾ ಸಮುದಾಯದವರ ಅಶೌರಾ ಹಬ್ಬದ ನಿಮಿತ್ತ ಮೆರವಣಿಗೆ ನಡೆಯುತ್ತಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT