ಶನಿವಾರ, ಮಾರ್ಚ್ 25, 2023
28 °C

ಬ್ರಿಟನ್‌: ಬೇಸರದಲ್ಲೇ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ ಬೋರಿಸ್‌ ಜಾನ್ಸನ್‌

ಪಿಟಿಐ Updated:

ಅಕ್ಷರ ಗಾತ್ರ : | |

ಲಂಡನ್‌: ಬ್ರಿಟನ್‌ ಪ್ರಧಾನಿ ಬೋರಿಸ್‌ ಜಾನ್ಸನ್‌ ಅವರು ಕೊನೆಗೂ ರಾಜೀನಾಮೆ ಸಲ್ಲಿಸಿದ್ದಾರೆ. ವಿಶ್ವದ ಅತ್ಯಂತ ಶ್ರೇಷ್ಠ ಕೆಲಸವನ್ನು ಬಿಟ್ಟುಕೊಡುವ ನೋವು ಕಾಡುತ್ತಿದೆ. ಅದು ಎಲ್ಲರಿಗೂ ತಿಳಿಯಬೇಕು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಮುಂದಿನ ಪ್ರಧಾನಿಯ ಆಯ್ಕೆ ಆಗುವವರೆಗೆ ಹುದ್ದೆಯಲ್ಲಿ ಮುಂದುವರಿಯುವುದಾಗಿ ಕನ್ಸರ್ವೇಟಿವ್‌ ಪಕ್ಷದ ನಾಯಕ ಬೋರಿಸ್‌ ಜಾನ್ಸನ್‌ ತಿಳಿಸಿದ್ದಾರೆ.

ರಾಜೀನಾಮೆ ನೀಡಿದ ಬಳಿಕ ಮಾತನಾಡಿದ ಜಾನ್ಸನ್‌ ಪಕ್ಷದಲ್ಲಿ ತನ್ನ ವಿರುದ್ಧ ಗುಂಪುಗೂಡಿದ್ದವರನ್ನು ದೂರಿದರು. ಕನ್ಸರ್ವೇಟಿವ್‌ ಪಕ್ಷಕ್ಕೆ ಹೊಸ ನಾಯಕನ ಆಯ್ಕೆಯಾಗಬೇಕು ಎಂಬುದು ಸ್ಪಷ್ಟವಾಗಿದೆ. ಹಾಗಾಗಿ ಹೊಸ ಪ್ರಧಾನಿ ನೇಮಕಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

ಮುಂದಿನ ಪ್ರಧಾನಿಯಾಗಿ ಇರಾಕ್‌ ಸಂಜಾತ ನಧೀಂ ಜಹಾವಿ ಅವರ ಹೆಸರು ಮುಂಚೂಣಿಯಲ್ಲಿದೆ.

ರಿಷಿ ಸುನಕ್‌ ಸಹಿತ ಎಂಟು ಹಿರಿಯ ಸಚಿವರು ಮತ್ತು ಐವರು ಕಿರಿಯ ಸಚಿವರು ಸರ್ಕಾರದಿಂದ ಹೊರ ನಡೆದ ಬಳಿಕ ಬೋರಿಸ್‌ ಜಾನ್ಸನ್‌ ರಾಜೀನಾಮೆ ನೀಡುವ ಅನಿವಾರ್ಯತೆಗೆ ಸಿಲುಕಿದ್ದರು. ಹಲವು ಸಚಿವರು ರಾಜೀನಾಮೆ ಸಲ್ಲಿಸಿದ್ದರೂ, ಪ್ರಧಾನಿ ಹುದ್ದೆ ತೊರೆಯುವುದಿಲ್ಲ ಎಂದೂ ಜಾನ್ಸನ್‌ ಪಟ್ಟು ಹಿಡಿದಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು