ಸೋಮವಾರ, ಮಾರ್ಚ್ 27, 2023
32 °C

ಯುಕೆ ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಬೋರಿಸ್ ಜಾನ್ಸನ್‌ಗೆ ದಂಡ

ನ್ಯೂಯಾರ್ಕ್ ಟೈಮ್ಸ್‌ Updated:

ಅಕ್ಷರ ಗಾತ್ರ : | |

ಲಂಡನ್: ಡೌನಿಂಗ್ ಸ್ಟ್ರೀಟ್‌ನಲ್ಲಿ ಕೋವಿಡ್ ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಇಂಗ್ಲೆಂಡ್ ಪ್ರಧಾನಿ ಬೋರಿಸ್ ಜಾನ್ಸನ್ ಅವರಿಗೆ ದಂಢ ವಿಧಿಸಲಾಗುತ್ತದೆ ಎಂದು ಮಂಗಳವಾರ ವರದಿಯಾಗಿದೆ. ಹಾಗಾಗಿ ಪ್ರಧಾನಿಯೇ ಅವರ ಕಚೇರಿಯಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿದವರಲ್ಲಿ ಮೊದಲಿಗರಾಗಿದ್ದಾರೆ.

ಜಾನ್ಸನ್‌ರನ್ನು ರಾಜಕೀಯವಾಗಿ ಹಾನಿಗೊಳಿಸಿದ 'ಪಾರ್ಟಿಗೇಟ್' ಹಗರಣದ ವಿಚಾರಣೆಯ ಭಾಗವಾಗಿ ಕನಿಷ್ಠ 50 ಲಾಕ್‌ಡೌನ್ ನಿಯಮ ಉಲ್ಲಂಘನೆಗಳನ್ನು ಗುರುತಿಸಲಾಗಿದೆ ಎಂದು ಲಂಡನ್‌ನ ಮೆಟ್ರೋಪಾಲಿಟನ್ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಜಾನ್ಸನ್ ಮತ್ತು ಬ್ರಿಟನ್‌ ಹಣಕಾಸು ಸಚಿವ ರಿಷಿ ಸುನಕ್‌ ಇಬ್ಬರಿಗೂ ನಿಯಮ ಉಲ್ಲಂಘನೆಗಾಗಿ ನಿಗದಿತ ದಂಡ ವಿಧಿಸಲಾಗುತ್ತಿದೆ ಎಂದು ಪ್ರಧಾನಿ ಕಚೇರಿ ತಿಳಿಸಿದೆ.

ಕೋವಿಡ್-19 ಲಾಕ್‌ಡೌನ್ ನಿಯಮಗಳ ಉಲ್ಲಂಘನೆಯ ಆರೋಪಗಳ ವಿಚಾರಣೆಯನ್ನು ಸರ್ಕಾರಿ ಅಧಿಕಾರಿಗಳು ನಡೆಸುತ್ತಿದ್ದಾರೆ. ಮಂಗಳವಾರದ ಹೊತ್ತಿಗೆ 'ಸುಮಾರು 50ಕ್ಕೂ ಹೆಚ್ಚು ಘಟನೆಗಳಲ್ಲಿ ನೋಟಿಸ್ ನೀಡಲು ಸೂಚಿಸಿದೆ. ಇದು ನ್ಯಾಯಾಲಯಕ್ಕೆ ಹಾಜರಾಗದೆ ದಂಡವನ್ನು ವಿಧಿಸುವ ಪ್ರಕ್ರಿಯೆಯಾಗಿದೆ ಎಂದು ಮೆಟ್ರೊಪಾಲಿಟನ್ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು