ಗ್ಯಾಬೋರೋನ್: ಕೊರೊನಾ ವೈರಸ್ನ ರೂಪಾಂತರ ತಳಿ ಓಮಿಕ್ರಾನ್ ಸೋಂಕಿನ 19 ಪ್ರಕರಣಗಳು ದೃಢಪಟ್ಟಿವೆ ಎಂದು ಬೋಟ್ಸ್ವಾನಾ ಆರೋಗ್ಯ ಇಲಾಖೆ ಭಾನುವಾರ ಮಾಹಿತಿ ನೀಡಿದೆ.

ನವೆಂಬರ್ 7 ರಂದು ರಾಜತಾಂತ್ರಿಕ ಕಾರ್ಯಗಳ ನಿಮಿತ್ತ ಬೋಟ್ಸಾವಾನಾವನ್ನು ಪ್ರವೇಶಿಸಿದ ನಾಲ್ವರು ವಿದೇಶಿ ಪ್ರಜೆಗಳಲ್ಲಿ ಮೊದಲ ಬಾರಿಗೆ ಓಮಿಕ್ರಾನ್ ಸೋಂಕು ಇರುವುದು ಪತ್ತೆಯಾಗಿತ್ತು.

ಓಮಿಕ್ರಾನ್ ಸೋಂಕು ಪ್ರಕರಣಗಳು ಪತ್ತೆಯಾಗಿರುವ ಟಹಿನ್ನೆಲೆಯಲ್ಲಿ ವಿದೇಶಗಳಿಂದ ಬರುವ ಮತ್ತು ವಿದೇಶಕ್ಕೆ ತೆರಳುವ ಎಲ್ಲಾ ಪ್ರಯಾಣಿಕರಿಗೆ ನಿರ್ಬಂಧ ಹೇರಿ ಅಲ್ಲಿನ ಸರ್ಕಾರ ಆದೇಶ ಹೊರಡಿಸಿದೆ.

ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೊನಾ ವೈರಸ್ನ ಹೊಸ ರೂಪಾಂತರ ತಳಿಗೆ (ಬಿ.1.1.529) ‘ಓಮಿಕ್ರಾನ್’ ಎಂಬ ಹೆಸರಿಡಲಾಗಿದೆ. ಇದು ಜಗತ್ತಿನಾದ್ಯಂತ ಭಾರಿ ಕಳವಳ ಮೂಡಿಸಿದ್ದು, ಅತ್ಯಂತ ವೇಗವಾಗಿ ಹರಡುವ ಸಾಮರ್ಥ್ಯ ಹೊಂದಿದೆ.

ದಕ್ಷಿಣ ಆಫ್ರಿಕಾ, ಬೋಟ್ಸ್ವಾನಾ, ಜಿಂಬಾಬ್ವೆ, ನಮೀಬಿಯಾ ಮತ್ತು ಲೆಸೊಟೊ ದೇಶದಲ್ಲಿ ಈ ತಳಿಯ ವೈರಾಣು ತಗುಲಿರುವ ಪ್ರಕರಣಗಳು ಪತ್ತೆಯಾಗಿವೆ. ದಕ್ಷಿಣ ಆಫ್ರಿಕಾದಲ್ಲಿ ಈ ತಿಂಗಳ ಆರಂಭದಿಂದ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆ ವಿಪರೀತ ಪ್ರಮಾಣದಲ್ಲಿ ಏರಿಕೆಯಾಗಿದೆ. ಈ ಏರಿಕೆಗೆ ಓಮಿಕ್ರಾನ್ ತಳಿಯೇ ಕಾರಣವಾಗಿರಬಹುದು. ದಕ್ಷಿಣ ಆಫ್ರಿಕಾದ ನೆರೆಯ ದೇಶಗಳಿಗೂ ಈ ರೂಪಾಂತರ ತಳಿಯು ಹರಡಿರಬಹದು ಎಂದು ವಿಶ್ವ ಆರೋಗ್ಯ ಸಂಸ್ಥೆಯ ಆಫ್ರಿಕಾ ಘಟಕವು ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.