ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವ್ಯಾಕ್ಸಿನ್ ಕ್ಲಿನಿಕಲ್ ಅಧ್ಯಯನ ರದ್ದುಗೊಳಿಸಿದ ಬ್ರೆಜಿಲ್

Last Updated 27 ಜುಲೈ 2021, 1:56 IST
ಅಕ್ಷರ ಗಾತ್ರ

ಬ್ರಸಿಲಿಯಾ: ಭಾರತದ ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿರುವ ಕೋವಿಡ್ ಲಸಿಕೆ ‘ಕೋವ್ಯಾಕ್ಸಿನ್‌’ನ ಕ್ಲಿನಿಕಲ್ ಅಧ್ಯಯನವನ್ನು ಬ್ರೆಜಿಲ್‌ನ ಆರೋಗ್ಯ ನಿಯಂತ್ರಕ ರದ್ದುಪಡಿಸಿದೆ.

2 ಕೋಟಿ ಡೋಸ್‌ ಲಸಿಕೆ ಖರೀದಿಗೆ ಸಂಬಂಧಿಸಿ ಸರ್ಕಾರ ಕೈಗೊಂಡಿರುವ ಕ್ರಮಗಳಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿರುವ ಬೆನ್ನಲ್ಲೇ ಕ್ಲಿನಿಕಲ್ ಅಧ್ಯಯನ ರದ್ದುಪಡಿಸುವ ಕ್ರಮ ಕೈಗೊಳ್ಳಲಾಗಿದೆ.

ಬ್ರೆಜಿಲ್‌ನ ಪ್ರೆಸಿಸಾ ಮೆಡಿಸಿಮೆಂಟೋಸ್ ಮತ್ತು ಎನ್ವಿಕ್ಸಿಯಾ ಫಾರ್ಮಾಸ್ಯುಟಿಕಲ್ಸ್ ಎಲ್ಎಲ್‌ಸಿ ಜತೆಗಿನ ಒಪ್ಪಂದವನ್ನು ಕೊನೆಗೊಳಿಸಲಾಗಿದೆ ಎಂದು ಭಾರತ್ ಬಯೋಟೆಕ್ ಕಂಪನಿ ಶುಕ್ರವಾರ ತಿಳಿಸಿತ್ತು. ಬ್ರೆಜಿಲ್‌ನಲ್ಲಿ ಕೋವ್ಯಾಕ್ಸಿನ್‌ ಪರಿಚಯಿಸುವ ಉದ್ದೇಶದಿಂದ ಭಾರತ್‌ ಬಯೋಟೆಕ್‌ ಈ ಎರಡೂ ಕಂಪನಿಗಳೊಂದಿಗೆ ಒಪ್ಪಂದ ಮಾಡಿಕೊಂಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT