ಶನಿವಾರ, ಡಿಸೆಂಬರ್ 3, 2022
27 °C

ಹವಾಮಾನ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿರುವ ಬ್ರಿಟನ್‌ ಪ್ರಧಾನಿ ರಿಷಿ ಸುನಕ್‌

ಪಿಟಿಐ Updated:

ಅಕ್ಷರ ಗಾತ್ರ : | |

ಲಂಡನ್‌: ಮುಂದಿನ ವಾರ ಈಜಿಪ್ಟ್‌ನಲ್ಲಿ ನಡೆಯಲಿರುವ ಜಾಗತಿಕ ಹವಾಮಾನ ಶೃಂಗಸಭೆಯಲ್ಲಿ ಪಾಲ್ಗೊಳ್ಳುವುದಾಗಿ ಬ್ರಿಟನ್‌ ಪ್ರಧಾನಿ ರಿಷಿ ಸುನಕ್‌ ಬುಧವಾರ ಹೇಳಿದ್ದಾರೆ.

ದೇಶದೊಳಗಿನ ಆಂತರಿಕ ಸಮಸ್ಯೆಗಳು ಹಾಗೂ ಆರ್ಥಿಕ ಬಿಕ್ಕಟ್ಟು ಪರಿಹರಿಸುವುದರ ಕಡೆ ಹೆಚ್ಚಿನ ಗಮನ ಕೇಂದ್ರೀಕರಿಸುವ ಉದ್ದೇಶದಿಂದ ಶೃಂಗಸಭೆಯಲ್ಲಿ ಪಾಲ್ಗೊಳ್ಳದಿರಲು ಸುನಕ್‌ ನಿರ್ಧರಿಸಿದ್ದರು. ಈ ಸಂಬಂಧ ಅವರ ಕಾರ್ಯಾಲಯ ಪ್ರಕಟಣೆ ಹೊರಡಿಸಿತ್ತು. ಸುನಕ್‌ ಅವರ ತೀರ್ಮಾನಕ್ಕೆ ಭಾರಿ ಟೀಕೆ ವ್ಯಕ್ತವಾಗಿತ್ತು. ಹೀಗಾಗಿ ಅವರು ತೀರ್ಮಾನ ಬದಲಿಸಿದ್ದಾರೆ.

‘ಹವಾಮಾನ ಬದಲಾವಣೆ ಕುರಿತು ಸೂಕ್ತ ಕ್ರಮ ಕೈಗೊಳ್ಳದಿದ್ದರೆ ದೀರ್ಘಾವಧಿಯ ಸಮೃದ್ಧಿ ಸಿಗುವುದಿಲ್ಲ’ ಎಂದು ಸುನಕ್‌ ಟ್ವೀಟ್‌ ಮಾಡಿದ್ದಾರೆ.

ಸುನಕ್‌ ಅವರ ನಡೆಯನ್ನು ಬ್ರಿಟನ್‌ನ ವಿರೋಧ ಪಕ್ಷ ಲೇಬರ್‌ ಪಾರ್ಟಿ ಟೀಕಿಸಿದೆ. ಪ್ರಧಾನಿ ನಿರ್ಧಾರದಿಂದ ಜಾಗತಿಕ ವೇದಿಕೆಯಲ್ಲಿ ಬ್ರಿಟನ್‌ ಮುಜುಗರ ಅನುಭವಿಸುವಂತಾಗಿದೆ ಎಂದು ಹೇಳಿದೆ. 

ಶೃಂಗಸಭೆಯು ಇದೇ 6ರಿಂದ 18ರವರೆಗೆ ಈಜಿಪ್ಟ್‌ನ ಶರ್ಮ್‌ ಎಲ್‌ ಶೇಖ್‌ ನಗರದಲ್ಲಿ ನಡೆಯಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು