ಗುರುವಾರ , ಸೆಪ್ಟೆಂಬರ್ 23, 2021
21 °C

ಸ್ಯಾಮ್‌ ಅಸ್ಟಾರಿಯೊಂದಿಗೆ ಪಾಪ್‌ ತಾರೆ ಬ್ರಿಟ್ನಿ ಸ್ಪಿಯರ್ಸ್ ನಿಶ್ಚಿತಾರ್ಥ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಲಾಸ್ಏಂಜಲೀಸ್‌: ಪಾಪ್‌ ತಾರೆ ಬ್ರಿಟ್ನಿ ಸ್ಪಿಯರ್ಸ್ ಅವರು ತಮ್ಮ ದೀರ್ಘಕಾಲದ ಪ್ರಿಯಕರ ಸ್ಯಾಮ್‌ ಅಸ್ಘಾರಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿರುವುದಾಗಿ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಇನ್‌ಸ್ಟಾಗ್ರಾಂನಲ್ಲಿ ವಿಡಿಯೊವೊಂದನ್ನು ಹಂಚಿಕೊಂಡಿರುವ ಬ್ರಿಟ್ನಿ ಸ್ಪಿಯರ್ಸ್‌ ಅವರು,‘ ನನಗೆ ಇದನ್ನು ನಂಬಲು ಸಾಧ್ಯವಿಲ್ಲ’ ಎಂದು ಬರೆದುಕೊಂಡಿದ್ದಾರೆ.

ವಿಡಿಯೊದಲ್ಲಿ ಬ್ರಿಟ್ನಿ ಅವರು ತಮ್ಮ ಬೆರಳಿನಲ್ಲಿರುವ ಉಗುರವನ್ನು ತೋರಿಸಿ,  ಸ್ಯಾಮ್‌ ಅಸ್ಘಾರಿಯೊಂದಿಗಿನ ನಿಶ್ಚಿತಾರ್ಥದ ಬಗ್ಗೆ ಖಚಿತಪಡಿಸಿದ್ದಾರೆ.ವೈಯಕ್ತಿಕ ಫಿಟ್ನೆಸ್ ತರಬೇತುದಾರ ಮತ್ತು ನಟ ಅಸ್ಘಾರಿ ಅವರು ಕೂಡ ತಮ್ಮ ಇನ್‌ಸ್ಟಾಗ್ರಾಂನಲ್ಲಿ  ನಿಶ್ಚಿತಾರ್ಥದ ಬಗ್ಗೆ ಪೋಸ್ಟ್‌ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು