ಕಠ್ಮಂಡು: ನೇಪಾಳದ ರಾರಾ ಸರೋವರಕ್ಕೆ ಖ್ಯಾತಿಯಾದ ಮುಗು ಜಿಲ್ಲೆಯಲ್ಲಿ ಮಂಗಳವಾರ ಬಸ್‌ವೊಂದು ನದಿಗೆ ಉರುಳಿಬಿದ್ದು 22 ಪ್ರಯಾಣಿಕರು ಸಾವನ್ನಪ್ಪಿದ್ದು, 16 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನೇಪಾಳಗುಂಜ್‌ನಿಂದ ಮುಗು ಜಿಲ್ಲೆಯ ಜಿಲ್ಲಾ ಕೇಂದ್ರವಾದ ಗಾಮಗಧಿಯತ್ತ ತೆರಳುತ್ತಿದ್ದ ಬಸ್ ಛಾಯನಾಥ ರಾರಾ ಪುರಸಭೆ ವ್ಯಾಪ್ತಿಯಲ್ಲಿರುವ ಪಿನಾ ಝ್ಯಾರಿ ನದಿಗೆ ಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಜಯ ದಶಮಿ ಹಬ್ಬ ಆಚರಿಸಲು ದೇಶದ ವಿವಿಧ ಭಾಗಗಳಿಂದ ಮನೆಗೆ ಮರಳುತ್ತಿದ್ದ ಅನೇಕ ಪ್ರಯಾಣಿಕರು ಈ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು. ರಕ್ಷಣಾ ಕಾರ್ಯಾಚರಣೆಗೆ ನೇಪಾಳ ಸೇನೆಯ ಹೆಲಿಕಾಪ್ಟರ್ ಅನ್ನು ಸುರಖೇಟಿನಿಂದ ಅಪಘಾತ ನಡೆದ ಸ್ಥಳಕ್ಕೆ ಕಳುಹಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.