ಬುಧವಾರ, ಏಪ್ರಿಲ್ 14, 2021
29 °C

ಶ್ರೀಲಂಕಾ: ಪ್ರಪಾತಕ್ಕೆ ಬಿದ್ದ ಬಸ್‌, 14 ಮಂದಿ ಸಾವು

ಎಪಿ Updated:

ಅಕ್ಷರ ಗಾತ್ರ : | |

Prajavani

ಕೊಲಂಬೊ: ಶ್ರೀಲಂಕಾದಲ್ಲಿ ಬಸ್‌ವೊಂದು ಪ್ರಪಾತಕ್ಕೆ ಉರುಳಿ ಬಿದ್ದ ಪರಿಣಾಮ 14 ಮಂದಿ ಮೃತಪಟ್ಟು, 30 ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ಶನಿವಾರ ಸಂಭವಿಸಿದೆ.

‘ಮಧ್ಯ ಶ್ರೀಲಂಕಾದ ಪಸ್ಸಾರಾ ಪಟ್ಟಣ ಬಳಿಯ ಪ್ರಪಾತಕ್ಕೆ ಬಸ್‌ ಉರುಳಿ ಬಿದ್ದಿದೆ’ ಎಂದು ಪೊಲೀಸರು ತಿಳಿಸಿದರು.

‘ಚಾಲಕನ ನಿರ್ಲಕ್ಷ್ಯದಿಂದ ಈ ಅಪಘಾತ ಸಂಭವಿಸಿದೆ ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಘಟನೆಯಲ್ಲಿ ಚಾಲಕ ಬದುಕುಳಿದಿದ್ದಾನೆಯೇ ಎಂಬುದರ ಬಗ್ಗೆ ಸ್ಪಷ್ಟತೆಯಿಲ್ಲ’ ಎಂದು ಪೊಲೀಸರ ವಕ್ತಾರ ಅಜಿತ್‌ ರೋಹಾನಾ ಮಾಹಿತಿ ನೀಡಿದರು.

‘ಈ ಬಸ್ಸಿನಲ್ಲಿ 70 ಕ್ಕೂ ಹೆಚ್ಚು ಪ್ರಯಾಣಿಕರು ಇದ್ದರು’ ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು