ಮಂಗಳವಾರ, ಜೂನ್ 15, 2021
26 °C

ಪಾಕಿಸ್ತಾನ| ಸಿಂಧ್‌ ಹೆದ್ದಾರಿಯಲ್ಲಿ ಮಗುಚಿಬಿದ್ದ ಬಸ್: ಅಪಘಾತದಲ್ಲಿ 13 ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

iStock iMage

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಗುರುವಾರ ಬೆಳಗಿನ ಜಾವ ಸಂಭವಿಸಿದ ಬಸ್ ಅಪಘಾತದಲ್ಲಿ ಕನಿಷ್ಠ 13 ಜನರು ಮೃತಪಟ್ಟು 32 ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಸಿಂಧ್ ಪ್ರಾಂತ್ಯದಲ್ಲಿನ ಸುಕ್ಕೂರ್‌ನ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. 

ಅಪಘಾತಕ್ಕೊಳಗಾದ ಬಸ್ ಮುಲ್ತಾನ್‌ನಿಂದ ಕರಾಚಿಗೆ ತೆರಳುತ್ತಿತ್ತು ಎನ್ನಲಾಗಿದೆ. ಅಲ್ಲದೆ, ಅಪಘಾತದ ಸಂದರ್ಭದಲ್ಲಿ ಬಹುತೇಕ ಪ್ರಯಾಣಿಕರು ನಿದ್ದೆ ಮಾಡುತ್ತಿದ್ದರು ಎಂದು ವರದಿ ಹೇಳಿದೆ.

ಗಾಯಗೊಂಡಿರುವವರ ಪೈಕಿ ಹಲವರ ಸ್ಥಿತಿ ಗಂಭೀರವಾಗಿದೆ. ಅಲ್ಲದೆ, ಸಾವನ್ನಪ್ಪಿರುವವರ ಪೈಕಿ ಮಕ್ಕಳು ಮತ್ತು ಮಹಿಳೆಯರು ಕೂಡ ಇದ್ದಾರೆ.

ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲು ನೆರವಾದ ಸ್ಥಳೀಯರು ಕ್ರೇನ್ ಮೂಲಕ ಬಸ್ ಅನ್ನು ರಸ್ತೆಯಿಂದ ಬದಿಗೆ ಸರಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು