ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌: ಕ್ಯಾಲಿಫೋರ್ನಿಯಾದ ಶವಾಗಾರಗಳಲ್ಲಿ ಸ್ಥಳದ ಅಭಾವ

Last Updated 3 ಜನವರಿ 2021, 6:53 IST
ಅಕ್ಷರ ಗಾತ್ರ

ಲಾಸ್‌ ಏಂಜಲೀಸ್: ದಕ್ಷಿಣ ಕ್ಯಾಲಿಫೋರ್ನಿಯಾದಲ್ಲಿ ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, ಶವಗಾರಗಳಲ್ಲಿ ಸ್ಥಳದ ಕೊರತೆ ಉಂಟಾಗಿದೆ ಎಂದು ಮೂಲಗಳು ಹೇಳಿವೆ.

‘ಅಮೆರಿಕದಲ್ಲಿ ಈವರೆಗೆ 3,50,000 ಮಂದಿ ಕೋವಿಡ್‌ನಿಂದ ಸಾವಿಗೀಡಾಗಿದ್ದಾರೆ. ಅಲ್ಲದೆ, 2 ಕೋಟಿಗೂ ಹೆಚ್ಚು ಜನರಲ್ಲಿ ಸೋಂಕು ದೃಢಪಟ್ಟಿದೆ’ ಎಂದು ಜಾನ್ಸ್ ಹಾಕಿನ್ಸ್ ವಿಶ್ವವಿದ್ಯಾಲಯದ ಅಂಕಿ ಅಂಶದಿಂದ ತಿಳಿದುಬಂದಿದೆ.

‘ನಾನು ಕಳೆದ 40 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆದರೆ ಯಾವುದೇ ಕುಟಂಬಕ್ಕೆ ನಿಮ್ಮ ಮನೆಯ ಸದಸ್ಯನಿಗೆ ಇಲ್ಲಿ ಸ್ಥಳವಿಲ್ಲ ಎಂದು ಹೇಳುವ ಪರಿಸ್ಥಿತಿ ಬಂದಿರಲಿಲ್ಲ. ಆದರೆ ಈಗ ಶವಗಾರದಲ್ಲಿ ಸ್ಥಳಗಳ ಕೊರತೆ ಎದುರಾಗಿದೆ’ ಎಂದು ಲಾಸ್ ಏಂಜಲೀಸ್‌ನ ಕಾಂಟಿನೆಂಟಲ್ ಫ್ಯುನರಲ್‌ ಹೋಂ ಮಾಲೀಕ ಮ್ಯಾಗ್ಡಾ ಮಾಲ್ಡೊನಾಡೊ ಅವರು ಹೇಳಿದರು.

‘ಕ್ಯಾಲಿಫೋರ್ನಿಯಾದಲ್ಲಿಯೇ ಈವರೆಗೆ 10,000 ಕ್ಕೂ ಹೆಚ್ಚು ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಆಸ್ಪತ್ರೆಗಳಲ್ಲೂ ರೋಗಿಗಳು ತುಂಬಿ ಹೋಗಿದ್ದು, ಆಮ್ಲಜನಕದ ಕೊರತೆಯೂ ಉಂಟಾಗಿದೆ’ ಎಂದು ಮೂಲಗಳು ಹೇಳಿವೆ.

‘ಅಮೆರಿಕದಲ್ಲಿ ಕಳೆದ ಏಳು ದಿನಗಳಲ್ಲಿ 2500 ಮಂದಿ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಇದೇ ಅವಧಿಯಲ್ಲಿ ಹೊಸದಾಗಿ 195,000 ಪ್ರಕರಣಗಳು ವರದಿಯಾಗಿವೆ’ ಎಂದು ವಿಶ್ವವಿದ್ಯಾಲಯದ ಮೂಲಗಳು ಹೇಳಿದೆ.

ಅಂಕಿ ಅಂಶಗಳ ಪ್ರಕಾರ, ಉತ್ತರ ಕ್ಯಾಲಿಫೋರ್ನಿಯಾದಲ್ಲಿ ಹೊಸ ವರ್ಷದಂದು 9,527 ಪ್ರಕರಣಗಳು ವರದಿಯಾಗಿವೆ. ಇದ, ಹಿಂದಿನ ದಿನ ದಾಖಲಾಗಿದ್ದಕ್ಕಿಂತ 1 ಸಾವಿರ ಪ್ರಕರಣಗಳು ಅಧಿಕವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT