ಶನಿವಾರ, 15 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ರಿಟನ್ ಸಂಸತ್ತಿನಲ್ಲೇ ಸದಸ್ಯನಿಂದ ಅಶ್ಲೀಲ ವಿಡಿಯೊ ವೀಕ್ಷಣೆ: ವಿವಾದ

Last Updated 1 ಮೇ 2022, 12:41 IST
ಅಕ್ಷರ ಗಾತ್ರ

ಲಂಡನ್: ಬ್ರಿಟನ್ ಸಂಸತ್ತಿನಲ್ಲಿ ಕನ್ಸರ್ವೇಟಿವ್ ಪಕ್ಷದ ಸದಸ್ಯ ನೀಲ್‌ ಪರೀಷ್‌ ಎಂಬುವವರು2 ಬಾರಿ ಅಶ್ಲೀಲ ವಿಡಿಯೊ ವೀಕ್ಷಣೆ ಮಾಡಿರುವುದನ್ನು ಒಪ್ಪಿಕೊಂಡಿದ್ದು, ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಈ ವಿಚಾರವು ಭಾರಿ ವಿವಾದಕ್ಕೆ ಕಾರಣವಾಗಿದ್ದು, ಅವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಹಿರಿಯ ಸದಸ್ಯರು ಒತ್ತಾಯಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಸ್ಪೀಕರ್ ಲಿಂಡ್‌ಸೇ ಹೊಯ್ಲೆ, ಕೆಲವು ಗಂಭೀರವಾದ ಆರೋಪಗಳು ಕೇಳಿಬಂದಿವೆ. ಈ ವಿಚಾರದ ಬಗ್ಗೆ ನಾವು ತ್ವರಿತ ಮತ್ತು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಿದೆ.ಸಂಸತ್ತನ್ನು ಸುರಕ್ಷಿತ ಮತ್ತು ಎಲ್ಲರನ್ನೂ ಒಳಗೊಂಡ ಕೆಲಸದ ತಾಣವನ್ನಾಗಿ ಮಾಡಬೇಕಿದೆ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT