ಶನಿವಾರ, ಡಿಸೆಂಬರ್ 3, 2022
21 °C

ಪಾಕ್ ಪ್ರಧಾನಿ ಶೆಹಬಾಜ್‌, ಕಾಂಬೋಡಿಯಾ ಪ್ರಧಾನಿ ಹುನ್‌ ಸೇನ್‌ಗೆ ಕೋವಿಡ್ ದೃಢ

ಪಿಟಿಐ/ ಎಪಿ Updated:

ಅಕ್ಷರ ಗಾತ್ರ : | |

Prajavani

ಇಸ್ಲಾಮಾಬಾದ್‌/ ನುಸಾ ದುವಾ (ಇಂಡೋನೇಷ್ಯಾ) (ಪಿಟಿಐ/ ಎಪಿ): ಪಾಕಿಸ್ತಾನ ಪ್ರಧಾನಿ ಶೆಹಬಾಜ್‌ ಷರೀಫ್ ಮತ್ತು ಕಾಂಬೋಡಿಯಾ ಪ್ರಧಾನಿ ಹುನ್‌ ಸೇನ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಶೆಹಬಾಜ್ ಅವರು ಲಂಡನ್‌ ಭೇಟಿ ಮುಗಿಸಿ ವಾಪಸ್‌ ಬಂದ ನಂತರ ಅವರಿಗೆ ಸೋಂಕು ದೃಢಪಟ್ಟಿದೆ. ಕಳೆದ ಎರಡು ದಿನಗಳಿಂದ ಅವರು ಅನಾರೋಗ್ಯಕ್ಕೀಡಾಗಿದ್ದರು. ಕೋವಿಡ್‌ ಪರೀಕ್ಷೆ ಮಾಡಿಸಿದಾಗ ಸೋಂಕು ದೃಢಪಟ್ಟಿದೆ ಎಂದು ಮಾಹಿತಿ ಸಚಿವ ಮರಿಯುಂ ಔರಂಗಜೇಬ್ ಮಂಗಳವಾರ ತಿಳಿಸಿದ್ದಾರೆ. ಈ ಮೂಲಕ ಶೆಹಬಾಜ್‌ ಅವರಿಗೆ ಮೂರನೇ ಬಾರಿ ಕೊರೊನಾ ಸೋಂಕು ದೃಢಪಟ್ಟಿದೆ.

ಇನ್ನು ಈ ಕುರಿತು ಫೇಸ್‌ಬುಕ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಕಾಂಬೋಡಿಯಾ ಪ್ರಧಾನಿ ಹುನ್ ಸೇನ್‌, ‘ಸೋಮವಾರ ರಾತ್ರಿ ಸೋಂಕು ದೃಢಪಟ್ಟಿದೆ. ಹೀಗಾಗಿ ಬಾಲಿಯಲ್ಲಿ ನಡೆಯುತ್ತಿರುವ ಜಿ–20 ಶೃಂಗಸಭೆಯಲ್ಲಿ ಪಾಲ್ಗೊಳ್ಳದೆ ಕಾಂಬೋಡಿಯಾಗೆ ವಾಪಸ್ ಹೋಗುತ್ತಿದ್ದೇನೆ’ ಎಂದು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು