ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಪಾನ್‌ ಪ್ರಧಾನಿ ಶಿಂಜೊ ಉತ್ತರಾಧಿಕಾರಿ ಆಯ್ಕೆ ಆರಂಭ

Last Updated 8 ಸೆಪ್ಟೆಂಬರ್ 2020, 6:39 IST
ಅಕ್ಷರ ಗಾತ್ರ

ಟೋಕಿಯೊ: ಶಿಂಜೊ ಅಬೆ ಅವರಿಂದ ತೆರವಾದ ಪ್ರಧಾನ ಮಂತ್ರಿ ಸ್ಥಾನಕ್ಕೆ ಸಮರ್ಥ ಉತ್ತರಾಧಿಕಾರಿಯನ್ನು ಆಯ್ಕೆ ಮಾಡುವ ಪ್ರಕ್ರಿಯೆಗೆ ಮಂಗಳವಾರ ಚಾಲನೆ ದೊರೆತಿದೆ.

ಜಪಾನ್‌ ಆಡಳಿತ ಪಕ್ಷವನ್ನು ಮುನ್ನಡೆಸುವ ಸಮರ್ಥವಾದ ಅಭ್ಯರ್ಥಿಯ ಆಯ್ಕೆಯೂ ನಡೆದಿದ್ದು ಪಕ್ಷದ ಆಂತರಿಕ ಚುನಾವಣೆಯ ಪ್ರಚಾರ ಕಾರ್ಯ ಆರಂಭವಾಗಿದೆ.

ಶಿಂಜೊ ಅಬೆ ಅವರ ಬಲಗೈಭಂಟ ಹಾಗೂ ಸಚಿವ ಸಂಪುಟದ ಕಾರ್ಯದರ್ಶಿ 71ರ ಹರೆಯದ ಯೊಸಿಹಿಡೆ ಸುಗಾ ಅವರು ಲಿಬರಲ್ ಡೆಮಾಕ್ರಟಿಕ್ ಅಭ್ಯರ್ಥಿಯಾಗಿ ಕಳೆದವಾರ ಔಪಚಾರಿಕವಾಗಿ ಉಮೇದುವಾರಿಕೆ ಸಲ್ಲಿಸಿದ್ದಾರೆ. ಇವರ ವಿರುದ್ಧ ಮಾಜಿ ರಕ್ಷಣಾ ಸಚಿವ ಶಿಗೆರು ಇಶಿಬಾ ಮತ್ತು ಮಾಜಿ ವಿದೇಶಾಂಗ ಸಚಿವ ಫುಮಿಯೊ ಕಿಶಿದ (ಇಬ್ಬರೂ 63ರ ಹರೆಯದವರು) ಕಣಕ್ಕಿಳಿದಿದ್ದಾರೆ.

ಈಗಾಗಲೇ ಆಡಳಿತ ಪಕ್ಷಕ್ಕೆ ಸಂಸತ್ತಿನಲ್ಲಿ ಬಹುಮತವಿರುವುದರಿಂದ,ಸೆಪ್ಟೆಂಬರ್ 14ರಂದು ಪಕ್ಷದ ಆಂತರಿಕ ಚುನಾವಣೆಯಲ್ಲಿ ಆಯ್ಕೆಯಾಗುವವರು ಜಪಾನ್‌ನ ಮುಂದಿನ ಪ್ರಧಾನಿಯಾಗುತ್ತಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT