ಕೆನಡಾದದಲ್ಲಿ ಅಪಘಾತ: ಮೂವರು ಭಾರತೀಯರು ಅಪಾಯದಿಂದ ಪಾರು

ಟೊರೊಂಟೊ: ಕೆನಡಾದ ಒಂಟಾರಿಯಾ ಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಭಾರತದ ಮೂವರು ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದಾರೆ ಎಂದು ಭಾರತದ ರಾಯಭಾರಿ ಕಚೇರಿ ತಿಳಿಸಿದೆ.
ಮಾರ್ಚ್ 12ರಂದು ಎಂಟು ಮಂದಿ ಭಾರತೀಯ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ವ್ಯಾನ್ ಮತ್ತು ಟ್ರ್ಯಾಕ್ಟರ್ ನಡುವೆ ಅಪಘಾತ ಸಂಭವಿಸಿ, ಐವರು ಮೃತಪಟ್ಟಿದ್ದರು. ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವ್ಯಾನ್‌ನಲ್ಲಿ ಇದ್ದ ಮತ್ತೊಬ್ಬ ವಿದ್ಯಾರ್ಥಿ ಪಾರಾಗಿದ್ದಾನೆ ಎಂದು ರಾಯಭಾರಿ ಕಚೇರಿಯ ಅಧಿಕಾರಿ ಅಜಯ್ ಬಿಸಾರಿಯಾ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.