ಶನಿವಾರ, 10 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಂಜಾಬ್‌ನಲ್ಲಿನ ಬೆಳವಣಿಗೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ: ಮೆಲಾನಿಯಾ

Last Updated 25 ಮಾರ್ಚ್ 2023, 14:00 IST
ಅಕ್ಷರ ಗಾತ್ರ

ಟೊರೊಂಟೊ: ‘ಪಂಜಾಬ್‌ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ನಾವು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ’ ಎಂದು ಕೆನಡಾದ ವಿದೇಶಾಂಗ ಸಚಿವೆ ಮೆಲಾನಿಯಾ ಜೋಲಿ ತಿಳಿಸಿದ್ದಾರೆ.

ಕೆನಡಾ ಸಂಸದ, ಭಾರತೀಯ ಮೂಲದ ಇಕ್ವಿಂದರ್‌ ಎಸ್‌.ಗಹೀರ್‌ ಎಂಬುವರು ಗುರುವಾರ ಹೌಸ್‌ ಆಫ್‌ ಕಾಮನ್ಸ್‌ನಲ್ಲಿ ಕೇಳಿದ ಪ್ರಶ್ನೆಗೆ, ‘ನಮಗೆ ಪಂಜಾಬ್‌ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಅರಿವಿದೆ. ಅಲ್ಲಿ ಮೊದಲಿದ್ದ ಪರಿಸ್ಥಿತಿಯೇ ಮರಳಲಿ ಎಂದು ನಾವು ಬಯಸುತ್ತೇವೆ. ಆ ಕ್ಷಣಕ್ಕಾಗಿ ಎದುರು ನೋಡುತ್ತಿದ್ದೇವೆ’ ಎಂದು ಮೆಲಾನಿಯಾ ಉತ್ತರಿಸಿದ್ದಾರೆ.

ಪಂಜಾಬ್‌ನಲ್ಲಿ ಇಂಟರ್‌ನೆಟ್‌ ಸೇವೆಯ ಮೇಲೆ ನಿರ್ಬಂಧ ವಿಧಿಸಿರುವುದಾಗಿ ತಿಳಿದುಬಂದಿದೆ. ಭಾರತದಲ್ಲಿನ ಸದ್ಯದ ಪರಿಸ್ಥಿತಿ ಕುರಿತು ಸದನಕ್ಕೆ ಮಾಹಿತಿ ಒದಗಿಸಿ ಎಂದು ಗಹೀರ್‌ ಅವರು ಮೆಲಾನಿಯಾಗೆ ಮನವಿ ಮಾಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT