ಶನಿವಾರ, ಸೆಪ್ಟೆಂಬರ್ 25, 2021
24 °C
ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಕಾರ್ಯಚಟುವಟಿಕೆಗಳ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ

ಆಫ್ಗನ್‌ನಲ್ಲಿ ಉಗ್ರರ ಶಿಬಿರ ಮರುಸ್ಥಾಪನೆಗೆ ಅವಕಾಶ ನೀಡುವುದಿಲ್ಲ: ತಿರುಮೂರ್ತಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ವಿಶ್ವಸಂಸ್ಥೆ: ಅಫ್ಗಾನಿಸ್ತಾನದ ಪ್ರಸ್ತುತದ ಪರಿಸ್ಥಿತಿ ತೀವ್ರ ಕಳವಳಕಾರಿಯಾಗಿದ್ದು, ಅಲ್ಲಿ, ಪುನಃ ಉಗ್ರರ ಶಿಬಿರಗಳು ತಲೆ ಎತ್ತಿ, ದೇಶವನ್ನು ಮತ್ತೆ ಯುದ್ಧಪೀಡಿತವಾಗಿಸಲು ನಾವೆಂದೂ ಅವಕಾಶ ನೀಡುವುದಿಲ್ಲ ಎಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿನ ಭಾರತದ ರಾಯಭಾರಿ ಟಿ.ಎಸ್.ತಿರುಮೂರ್ತಿ ಅವರು ಒತ್ತಿ ಹೇಳಿದ್ದಾರೆ.

ಆಗಸ್ಟ್‌ 1 ರಂದು, ಭಾರತ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಅಧ್ಯಕ್ಷ ಸ್ಥಾನ ಅಲಂಕರಿಸಿದ ನಂತರ, ಮಂಡಳಿಯ ಮುಂದಿನ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಲು ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಸೋಮವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು.

‘ಅಫ್ಗಾನಿಸ್ತಾನದ ಪರಿಸ್ಥಿತಿ ಕುರಿತು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಪ್ರತಿಕ್ರಿಯೆ ಏನು‘ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ತಿರುಮೂರ್ತಿ, ‘ಅಫ್ಗಾನಿಸ್ಥಾನದಲ್ಲಿನ ಪ್ರಸ್ತುತದ ಪರಿಸ್ಥಿತಿ ಬಗ್ಗೆ ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಅಧ್ಯಕ್ಷರು ಮತ್ತು ಮಂಡಳಿ ಎಲ್ಲ ಸದಸ್ಯರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಆ ದೇಶದಲ್ಲಿ ಮತ್ತೆ ಉಗ್ರರ ಶಿಬಿರಗಳು ತಲೆ ಎತ್ತುವುದು, ಅದರಿಂದ ಭಾರತದ ಮೇಲೆ ನೇರವಾಗಿ ಪರಿಣಾಮ ಬೀರುವುದಕ್ಕೆ ಅವಕಾಶ ನೀಡುವುದಿಲ್ಲ‘ ಎಂದು ತಿರುಮೂರ್ತಿ ತಿಳಿಸಿದ್ದಾರೆ.

ಅಫ್ಗಾನಿಸ್ತಾನದ ಪರಿಸ್ಥಿತಿ ಕುರಿತು ವಿಶ್ವಸಂಸ್ಥೆ ನೀಡಿರುವ ವರದಿಯನ್ನು ಸುದ್ದಿಗೋಷ್ಠಿಯಲ್ಲಿ ಉಲ್ಲೇಖಿಸಿದ ತಿರುಮೂರ್ತಿ ಅವರು, ‘ಜನವರಿ ಮತ್ತು ಏಪ್ರಿಲ್ ನಡುವಿನ ಸಂಭವಿಸಿದ ಸಾವಿನ ಪ್ರಮಾಣಕ್ಕೆ ಹೋಲಿಸಿದರೆ, ಮೇ ಮತ್ತು ಜೂನ್ ತಿಂಗಳ ಅವಧಿಯಲ್ಲಿ ಸಾವಿನ ಸಂಖ್ಯೆ ಹೆಚ್ಚಾಗಿದೆ‘ ಎಂದು ಹೇಳಿದ್ದಾರೆ. 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು