ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮೆರಿಕ: ವೃದ್ಧರಿಗೆ ಬೂಸ್ಟರ್‌ ಡೋಸ್‌ ನೀಡಲು ಸಿಡಿಸಿ ಒಪ್ಪಿಗೆ

Last Updated 24 ಸೆಪ್ಟೆಂಬರ್ 2021, 6:05 IST
ಅಕ್ಷರ ಗಾತ್ರ

ವಾಷಿಂಗ್ಟನ್: ವೃದ್ಧರು ಹಾಗೂ ರೋಗ ನಿರೋಧಕ ಶಕ್ತಿ ಕಡಿಮೆ ಇರುವವರಿಗೆ ಕೋವಿಡ್‌ ಲಸಿಕೆಯ ಬೂಸ್ಟರ್‌ ಡೋಸ್‌ ನೀಡಲು ಅಮೆರಿಕದ ರೋಗಗಳ ನಿಯಂತ್ರಣ ಕೇಂದ್ರ (ಸಿಡಿಸಿ) ಒಪ್ಪಿಗೆ ನೀಡಿದೆ.

ಈ ಸಂಬಂಧ ತಜ್ಞರ ಸಮಿತಿ ನೀಡಿರುವ ಶಿಫಾರಸುಗಳಿಗೆ ಸಿಡಿಸಿ ನಿರ್ದೇಶಕ ಡಾ.ರಾಶೆಲ್ ವ್ಯಾಲೆನ್ಸ್ಕಿ ಗುರುವಾರ ಅಂಕಿತ ಹಾಕಿದ್ದಾರೆ. ಹೀಗಾಗಿ, ಕೋವಿಡ್‌–19 ವಿರುದ್ಧದ ಹೋರಾಟಕ್ಕೆ ಸಂಬಂಧಿಸಿದಂತೆ ಅಮೆರಿಕದಲ್ಲಿ ಮತ್ತೊಂದು ಬೃಹತ್‌ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ಸಿಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

‘65 ವರ್ಷಕ್ಕಿಂತ ಮೇಲ್ಪಟ್ಟವರು, ನರ್ಸಿಂಗ್‌ ಹೋಂಗಳಲ್ಲಿ ದಾಖಲಾದವರು, ಆರೋಗ್ಯ ಸಂಬಂಧಿ ಸಮಸ್ಯೆಗಳನ್ನು ಎದುರಿಸುತ್ತಿರುವ 50–64 ವಯೋಮಾನದವರಿಗೆ ಬೂಸ್ಟರ್‌ ಡೋಸ್‌ ನೀಡಬೇಕು’ ಎಂದು ತಜ್ಞರ ಸಮಿತಿ ಶಿಫಾರಸು ಮಾಡಿದೆ.

‘ಫೈಜರ್‌ ಕಂಪನಿಯ ಲಸಿಕೆ ತೆಗೆದುಕೊಂಡು ಕನಿಷ್ಠ 6 ತಿಂಗಳು ಆಗಿದ್ದರೆ, ಅಂಥವರಿಗೆ ಬೂಸ್ಟರ್‌ ಡೋಸ್‌ ನೀಡಬೇಕು ಎಂದೂ ಸಮಿತಿ ಶಿಫಾರಸು ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT