ಗುರುವಾರ, 1 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕಿಸ್ತಾನದಲ್ಲಿ ಗಗನಕ್ಕೇರಿದ ಕೋಳಿಮಾಂಸ ಬೆಲೆ: ಕೆಜಿ ₹ 720ಕ್ಕೆ ಮಾರಾಟ

Last Updated 12 ಫೆಬ್ರವರಿ 2023, 10:24 IST
ಅಕ್ಷರ ಗಾತ್ರ

ಕರಾಚಿ: ಪಾಕಿಸ್ತಾನದ ಪ್ರಮುಖ ನಗರಗಳಲ್ಲಿ ಕೋಳಿ ಮತ್ತು ಕೋಳಿ ಮಾಂಸದ ಬೆಲೆಗಳು ತೀವ್ರ ಏರಿಕೆ ಕಂಡಿದ್ದು, ದೇಶದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಗರಿಷ್ಠ ಬೆಲೆ ತಲುಪಿದೆ.

ಪ್ರಸ್ತುತ ಕರಾಚಿಯಲ್ಲಿ ಕೋಳಿ ಕೆಜಿಗೆ ₹490ರಷ್ಟಿದ್ದರೆ, ಕೋಳಿ ಮಾಂಸದ ಬೆಲೆ ಕೆಜಿಗೆ ₹720ಕ್ಕೆ ತಲುಪಿದೆ ಎಂದು ಇಲ್ಲಿನ ಮಾಧ್ಯಮಗಳು ವರದಿ ಮಾಡಿವೆ.

ದೇಶದಲ್ಲಿ ಆಹಾರದ ಕೊರತೆ ಎದುರಾಗಿದೆ. ಇದರಿಂದಾಗಿ ಕುಕ್ಕುಟೋದ್ಯಮವನ್ನು ಹಲವಾರು ವ್ಯಾಪಾರಸ್ಥರು ನಿಲ್ಲಿಸಿದ್ದಾರೆ. ಈ ಕಾರಣದಿಂದಾಗಿ ಕೋಳಿ ಮಾಂಸದ ಬೆಲೆ ಏರಿಕೆಯಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

ಕರಾಚಿಯಲ್ಲಿ ಒಂದು ಕೆ.ಜಿ ಕೋಳಿ ಮಾಂಸವು ₹720ಕ್ಕೆ ಮಾರಾಟವಾಗುತ್ತಿದೆ. ರಾವಲ್ಪಿಂಡಿ, ಇಸ್ಲಾಮಾಬಾದ್ ಸೇರಿದಂತೆ ಕೆಲವು ನಗರಗಳಲ್ಲಿ ಕೋಳಿ ಮಾಂಸದ ಬೆಲೆ ₹700-705ಕ್ಕೆ ಮಾರಾಟ ಮಾಡಲಾಗುತ್ತಿದೆ. ಲಾಹೋರ್‌ನಲ್ಲಿ ಕೆಜಿಗೆ ₹550-600ಕ್ಕೆ ಮಾರಾಟವಾಗುತ್ತಿದೆ ಎಂದು ಸಾಮಾ ಟಿವಿ ವರದಿ ಮಾಡಿದೆ.

ಇಲ್ಲಿನ ಜನರು ಪ್ರೋಟೀನ್‌ನ ಮೂಲವಾಗಿ ಕೋಳಿಯನ್ನು ಅವಲಂಬಿಸಿದ್ದಾರೆ. ಬೆಲೆ ಏರಿಕೆ ಬಗ್ಗೆ ಗ್ರಾಹಕರು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

ಸರ್ಕಾರವು ಪ್ರಸ್ತುತ ಆಹಾರ ಕೊರತೆ ನಿವಾರಿಸುವ ನಿಟ್ಟಿನಲ್ಲಿ ಮತ್ತು ಗ್ರಾಹಕರಿಗೆ ಪರಿಹಾರ ಒದಗಿಸಲು ಇತರ ಮಾರ್ಗಗಳನ್ನು ಹುಡುಕುತ್ತಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.

ಕುಕ್ಕುಟೋದ್ಯಮವು ಪಾಕಿಸ್ತಾನ ಆರ್ಥಿಕತೆ ಪ್ರಮುಖ ಭಾಗವಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT