ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಹ್ಯಾಕಾಶ ನಿಲ್ದಾಣಕ್ಕೆ ಗಗನ ಯಾತ್ರಿಗಳು: ಚೀನಾ ಸಜ್ಜು

ಜಿಯುಕ್ವಾನ್ ಉಪಗ್ರಹ ಉಡಾವಣಾ ಕೇಂದ್ರದಿಂದ ಬಾಹ್ಯಾಕಾಶ ನೌಕೆ ಉಡಾವಣೆ
Last Updated 16 ಜೂನ್ 2021, 6:57 IST
ಅಕ್ಷರ ಗಾತ್ರ

ಬೀಜಿಂಗ್ : ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು ಸಾಧಿಸುವ ಆಶಯದೊಂದಿಗೆ ಮೂವರು ಪುರುಷ ಗಗನಯಾತ್ರಿಗಳನ್ನು ಜೂನ್‌ 17ರಂದು ಹೊಸ ಬಾಹ್ಯಾಕಾಶ ನಿಲ್ದಾಣಕ್ಕೆ ಕಳುಹಿಸಲು ಸಜ್ಜಾಗಿರುವುದಾಗಿ ’ಚೀನಾ ಮ್ಯಾನ್ಡ್ ಸ್ಪೇಸ್ ಏಜೆನ್ಸಿ’ (ಸಿಎಂಎಸ್‌ಎ) ಬುಧವಾರ ತಿಳಿಸಿದೆ.

‘ನಿಯೆ ಹೈಶೆಂಗ್, ಲಿಯು ಬೊಮಿಂಗ್ ಮತ್ತು ಟ್ಯಾಂಗ್ ಹಾಂಗ್ಬೊ ಎಂಬ ಮೂವರು ಗಗನಯಾತ್ರಿಗಳನ್ನು ಹೊತ್ತ ಶೆನ್‌ಶಾವ್‌–12 ಆಕಾಶನೌಕೆ ಜಿಯುಕ್ವಾನ್ ಉಪಗ್ರಹ ಉಡಾವಣಾ ಕೇಂದ್ರದಿಂದ ಉಡಾವಣೆಯಾಗಲಿದೆ.ಟಿಯಾಂಗಾಂಗ್‌ ಬಾಹ್ಯಾಕಾಶ ನಿಲ್ದಾಣಕ್ಕೆ ತೆರಳುವ ಈ ಮೂವರು ಗಗನ ಯಾತ್ರಿಗಳು ಮೂರು ತಿಂಗಳ ಕಾಲ ಹೊಸ ಬಾಹ್ಯಾಕಾಶ ನಿಲ್ದಾಣದಲ್ಲಿ ಉಳಿಯಲಿದ್ದಾರೆ‘ ಎಂದು ಸಿಎಮ್ಎಸ್ಎ ನಿರ್ದೇಶಕ ಸಹಾಯಕ ಜಿ ಕಿಮಿಂಗ್ ಉಡಾವಣಾ ಕೇಂದ್ರದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಬಾಹ್ಯಾಕಾಶ ಕೇಂದ್ರ ನಿರ್ಮಾಣದ ಸಮಯದಲ್ಲಿ ಇದು ಮೊದಲ ಮಾನವಸಹಿತ ಕಾರ್ಯಾಚರಣೆಯಾಗಿದೆ ಎಂದು ಅವರು ಹೇಳಿದ್ದಾರೆ.

ಮುಂದಿನ ತಿಂಗಳು ಆಡಳಿತಾರೂಢ ಚೀನಾ ಕಮ್ಯನಿಸ್ಟ್‌ ಪಾರ್ಟಿಗೆ 100 ವರ್ಷಗಳು ತುಂಬುತ್ತಿರುವ ಹಿನ್ನೆಲೆಯಲ್ಲಿ ಈ ‘ಬಾಹ್ಯಾಕಾಶ ಯೋಜನೆ‘ಯನ್ನು ಕೈಗೊಳ್ಳಲಾಗಿದೆ.

ಹೊಸ ಬಾಹ್ಯಾಕಾಶ ನಿಲ್ದಾಣಕ್ಕೆ ಹೊರಟಿರುವ ಮೂವರು ಗಗನ ಯಾತ್ರಿಗಳು, ನಿಲ್ದಾಣದ ನಿರ್ಮಾಣ, ದುರಸ್ತಿ ಸೇರಿದಂತೆ ವಿವಿಧ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುತ್ತಾರೆ. ಮುಂದಿನ ವರ್ಷದ ಹೊತ್ತಿಗೆ ಈ ಬಾಹ್ಯಾಕಾಶ ನಿಲ್ದಾಣ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಅಂದಾಜಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT