ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂರು ಮಕ್ಕಳ ನೀತಿಗೆ ಚೀನಾ ಸರ್ಕಾರ ಅನುಮೋದನೆ

Last Updated 20 ಆಗಸ್ಟ್ 2021, 7:41 IST
ಅಕ್ಷರ ಗಾತ್ರ

ಬೀಜಿಂಗ್‌: ಜನನ ಪ್ರಮಾಣ ಕುಸಿತವನ್ನು ತಡೆಗಟ್ಟುವ ನಿಟ್ಟಿನಲ್ಲಿ ಜನಸಂಖ್ಯೆ ಮತ್ತು ಕುಟುಂಬ ಯೋಜನೆಯ ನೀತಿಯನ್ನು ಪರಿಷ್ಕರಿಸಿರುವ ಚೀನಾ ಸರ್ಕಾರ ಶುಕ್ರವಾರ ‘ಮೂರು ಮಕ್ಕಳ ನೀತಿ‘ಗೆ ಔಪಚಾರಿಕ ಅನುಮೋದನೆ ನೀಡಿದೆ.

ದಂಪತಿಗೆ ಮೂರು ಮಕ್ಕಳನ್ನು ಹೊಂದಲು ಅನುವು ಮಾಡಿಕೊಡುವ ಪರಿಷ್ಕೃತ ‘ಜನಸಂಖ್ಯೆ ಮತ್ತು ಕುಟುಂಬ ಯೋಜನೆ ಕಾನೂನನ್ನು ರಾಷ್ಟ್ರೀಯ ಪೀಪಲ್ಸ್ ಕಾಂಗ್ರೆಸ್‌ನ (ಎನ್‌ಪಿಸಿ) ಸ್ಥಾಯಿ ಸಮಿತಿ ಅಂಗೀಕರಿಸಿತು.

‌ಹೆಚ್ಚುತ್ತಿರುವ ವೆಚ್ಚಗಳಿಂದಾಗಿ ಚೀನಾದ ದಂಪತಿ ಹೆಚ್ಚಿನ ಮಕ್ಕಳನ್ನು ಹೊಂದಲು ಹಿಂಜರಿಯುತ್ತಿದ್ದರು. ಈ ಹಿನ್ನೆಲೆಯಲ್ಲಿ ಕುಟುಂಬ ಯೋಜನೆಯ ಕಾಯ್ದೆಗೆ ತಿದ್ದುಪಡಿ ತರುವ ಜೊತೆಗೆ, ಈ ಕಾನೂನಿನಲ್ಲಿ ಕುಟುಂಬಗಳಿಗೆ ಹೆಚ್ಚು ಸಾಮಾಜಿಕ ಮತ್ತು ಆರ್ಥಿಕ ಬೆಂಬಲ ನೀಡುವಂತಹ ಕ್ರಮಗಳಿಗೂ ಆದ್ಯತೆ ನೀಡಿದೆ.

ಈ ಹೊಸ ಕಾಯ್ದೆಯು ದೇಶದ ಬಂಡವಾಳ ಹೂಡಿಕೆ, ತೆರಿಗೆಗಳು, ವಿಮೆ, ಶಿಕ್ಷಣ, ವಸತಿ ಮತ್ತು ಉದ್ಯೋಗ ಕ್ಷೇತ್ರದ ಬೆಳವಣಿಗೆಗೆ ನೆರವಾಗುವ ಮೂಲಕ, ಕುಟುಂಬಗಳ ಮೇಲಿನ ಆರ್ಥಿಕ ಹೊರೆಯನ್ನು ತಗ್ಗಿಸುತ್ತದೆ. ಜೊತೆಗೆ, ಮಕ್ಕಳ ಶಿಕ್ಷಣದ ವೆಚ್ಚವನ್ನೂ ಕಡಿತಗೊಳಿಸಲಿದೆ ಎಂದು ಸ್ಥಳೀಯ ಪತ್ರಿಕೆಯೊಂದು ವರದಿ ಮಾಡಿದೆ.

ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಯಿಂದ ಸೃಷ್ಟಿಯಾಗುವ ಹೊಸ ಬೆಳವಣಿಗೆಗಳನ್ನು ನಿಭಾಯಿಸಲು ಹಾಗೂ ದೀರ್ಘ ಕಾಲದಲ್ಲಿ ಸಮತೋಲಿತವಾಗಿ ಜನಸಂಖ್ಯೆ ವೃದ್ಧಿಯನ್ನು ಉತ್ತೇಜಿಸಲು ಎನ್‌ಪಿಸಿ ಈ ಕಾಯ್ದೆಯನ್ನು ಪರಿಷ್ಕರಿಸಿದೆ.

ಕಳೆದ ಮೇ ತಿಂಗಳಲ್ಲಿ ಚೀನಾದ ಆಡಳಿತಾರೂಢ ಕಮ್ಯುನಿಸ್ಟ್ ಪಕ್ಷವು ಜನನದ ಮಿತಿಯನ್ನು ಸಡಿಲಗೊಳಿಸಲು ನಿರ್ಧರಿಸಿತ್ತು. ದಂಪತಿಗೆ ಇಬ್ಬರು ಮಕ್ಕಳ ಬದಲು ಮೂರು ಮಕ್ಕಳನ್ನು ಹೊಂದಲು ಅವಕಾಶ ಕಲ್ಪಿಸುವ ನೀತಿಗೆ ಅನುಮೋದನೆ ನೀಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT