ಮಂಗಳವಾರ, ಸೆಪ್ಟೆಂಬರ್ 29, 2020
22 °C

ಕೋವಿಡ್‌ ಸಮಯದಲ್ಲೇ ಚೀನಾ ಹೆಚ್ಚು ಆಕ್ರಮಣಕಾರಿಯಾಗಿ ವರ್ತಿಸುತ್ತಿದೆ: ಎಸ್ಪರ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ವಾಷಿಂಗ್ಟನ್‌: ‘ಕೋವಿಡ್‌–19 ಬಿಕ್ಕಟ್ಟಿನ ಸಮಯದಲ್ಲೇ ಚೀನಾವು ಹೆಚ್ಚು ಆಕ್ರಮಣಕಾರಿಯಾಗಿ ವರ್ತಿಸುತ್ತಿದೆ. ಇದನ್ನು ಇಡೀ ವಿಶ್ವವೇ ಗಮನಿಸುತ್ತಿದೆ’ ಎಂದು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಮಾರ್ಕ್‌ ಎಸ್ಪರ್‌ ತಿಳಿಸಿದ್ದಾರೆ.

‘ಕೊರೊನಾ ಬಿಕ್ಕಟ್ಟನ್ನು ಚೀನಾವು ಪ್ರಚಾರದ ಉದ್ದೇಶಕ್ಕೆ ಬಳಸಿಕೊಂಡಿದೆ. ದಕ್ಷಿಣ ಚೀನಾ ಸಮುದ್ರದ ಭಾಗದಲ್ಲಿ ಸೇನಾ ನೆಲೆಗಳನ್ನು ಸ್ಥಾಪಿಸುತ್ತಿದೆ. ಆ ಮೂಲಕ ನೆರೆಯ ರಾಷ್ಟ್ರಗಳ ಮೇಲೆ ಬಲ ಪ್ರಯೋಗ ಮಾಡಲು ಮುಂದಾಗಿದೆ’ ಎಂದು ಅವರು ದೂರಿದ್ದಾರೆ.

‘ಭಾರತದ ವಾಸ್ತವ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿಯೂ ಚೀನಾ ತನ್ನ ಸೇನೆಯನ್ನು ನಿಯೋಜಿಸಿದೆ. ಆ ಮೂಲಕ ಅಂತರರಾಷ್ಟ್ರೀಯ ನಿಯಮಾವಳಿಗಳನ್ನು ಗಾಳಿಗೆ ತೂರುತ್ತಿದೆ’ ಎಂದೂ ಅವರು ನುಡಿದಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು