ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕ್‌ ಉಗ್ರ ಸಾಜಿದ್ ಕಪ್ಪುಪಟ್ಟಿಗೆ: ಭಾರತ, ಅಮೆರಿಕದ ಪ್ರಸ್ತಾವಕ್ಕೆ ಚೀನಾ ತಡೆ

Last Updated 17 ಸೆಪ್ಟೆಂಬರ್ 2022, 13:33 IST
ಅಕ್ಷರ ಗಾತ್ರ

ವಿಶ್ವಸಂಸ್ಥೆ: 2008ರ ಮುಂಬೈ ದಾಳಿಯ ಪ್ರಮುಖ ಆರೋಪಿ, ಪಾಕಿಸ್ತಾನದ ಲಷ್ಕರ್–ಎ– ತಯಬಾ (ಎಲ್‌ಇಟಿ) ಸಂಘಟನೆಯ ಉಗ್ರ ಸಾಜಿದ್‌ ಮಿರ್‌ನನ್ನು ಕಪ್ಪುಪಟ್ಟಿಗೆ ಸೇರಿಸುವ ಭಾರತ ಮತ್ತು ಅಮೆರಿಕದ ಪ್ರಸ್ತಾಪಕ್ಕೆ ಚೀನಾ ತಡೆಯೊಡ್ಡಿದೆ.

ನಾಲ್ಕು ತಿಂಗಳ ಅವಧಿಯಲ್ಲಿ ಮೂರನೇ ಬಾರಿ ಚೀನಾ ಈ ರೀತಿಯಾಗಿ ತಡೆಯೊಡ್ಡಿದೆ.

ಮಿರ್‌ನನ್ನು ಜಾಗತಿಕ ಭಯೋತ್ಪಾದಕ ಎಂಬುದಾಗಿ ಘೋಷಿಸಬೇಕು ಮತ್ತು ಆತನಿಗೆ ಸೇರಿದ ಸ್ವತ್ತುಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸಭೆಯಲ್ಲಿ ಅಮೆರಿಕ ಪ್ರಸ್ತಾವ ಮಂಡಿಸಿತ್ತು. ಈ ಪ್ರಸ್ತಾವಕ್ಕೆ ಭಾರತವೂ ಬೆಂಬಲ ವ್ಯಕ್ತಪಡಿಸಿತ್ತು. ಆದರೆ, ಇತ್ತೀಚೆಗೆ ಚೀನಾ ಈ ಪ್ರಸ್ತಾಪಕ್ಕೆ ತಡೆಯೊಡ್ಡಿದೆ ಎಂದು ತಿಳಿದು ಬಂದಿದೆ.

ಮಿರ್‌ ಭಾರತಕ್ಕೆ ಬೇಕಾಗಿರುವ ಭಯೋತ್ಪಾದಕರಲ್ಲಿ ಒಬ್ಬನಾಗಿದ್ದು, ಮುಂಬೈ ಮೇಲಿನ ಭಯೋತ್ಪಾದನಾ ದಾಳಿಯ ಪ್ರಮುಖ ಸಂಚುಕೋರನಾಗಿದ್ದಾನೆ. ಅಮೆರಿಕವು ಈತನ ತಲೆಗೆ ₹ 40 ಲಕ್ಷ ನಗದು ಬಹುಮಾನ ಘೋಷಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT