ಶನಿವಾರ, ಮಾರ್ಚ್ 25, 2023
29 °C

ಚೀನಾ: ಕಮ್ಯುನಿಸ್ಟ್‌ ಪಕ್ಷದಿಂದ ಶತಮಾನೋತ್ಸವ ಆಚರಣೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಬೀಜಿಂಗ್‌: ಚೀನಾದ ಆಡಳಿತಾರೂಢ ಕಮ್ಯುನಿಸ್ಟ್‌ ಪಕ್ಷದ ಶತಮಾನೋತ್ಸವವನ್ನು ಇಲ್ಲಿನ ಟಿಯಾನನ್ಮೆನ್  ಸ್ಕ್ವೇರ್‌ನಲ್ಲಿ ಗುರುವಾರ ಅದ್ಧೂರಿಯಾಗಿ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪಕ್ಷದ ಕಾರ್ಯಕರ್ತರು ಮತ್ತು ಶಾಲಾ ಮಕ್ಕಳು, ಕಮ್ಯುನಿಸ್ಟ್‌ ಪಕ್ಷ ಮತ್ತು ದೇಶವನ್ನು ಹೊಗಳುವ ಗೀತೆಗಳನ್ನು ಹಾಡಿ, ಗೌರವ ಸಲ್ಲಿಸಿದರು.

ಬಾನಂಗಳದಲ್ಲಿ ವಿಮಾನಗಳಿಂದ ವಿವಿಧ ಕಸರತ್ತುಗಳ ಪ್ರದರ್ಶನದೊಂದಿಗೆ ಕಾರ್ಯಕ್ರಮವು ಆರಂಭಗೊಂಡಿತು. ಚೀನಾದ ಅಧ್ಯಕ್ಷ ಮತ್ತು ಕಮ್ಯುನಿಸ್ಟ್‌ ಪಕ್ಷದ(ಸಿಪಿಸಿ) ಮುಖ್ಯಸ್ಥರು ಆಗಿರುವ ಷಿ ಜಿನ್‌ಪಿಂಗ್‌ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಈ ಸಂಭ್ರಮಾಚರಣೆಯಲ್ಲಿ ಸೇನಾ ಪಥಸಂಚಲನ ಇಲ್ಲದಿದ್ದರೂ, ಭೂಸೇನೆ, ವಾಯುಪಡೆ ಮತ್ತು ನೌಕಾಪಡೆಯ ಸಿಬ್ಬಂದಿ ಲಘು ಪಥಸಂಚಲನ ನಡೆಸಿ, ಗೌರವ ವಂದನೆ ಸಲ್ಲಿಸಿದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು