ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀಲಂಕಾಕ್ಕೆ ವೈದ್ಯಕೀಯ ಸಾಮಗ್ರಿಗಳ ನೆರವು ನೀಡಿದ ಚೀನಾ

Last Updated 7 ಡಿಸೆಂಬರ್ 2022, 11:33 IST
ಅಕ್ಷರ ಗಾತ್ರ

ಕೊಲಂಬೊ: ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ದ್ವೀಪ ರಾಷ್ಟ್ರ ಶ್ರೀಲಂಕಾಕ್ಕೆ ಚೀನಾವು ಸುಮಾರು ₹ 445 ಕೋಟಿ ಮೌಲ್ಯದ ವೈದ್ಯಕೀಯ ಸಾಮಗ್ರಿಗಳ ನೆರವು ನೀಡಿದೆ ಎಂದು ಚೀನಾ ರಾಯಭಾರಿ ಕಚೇರಿಯು ಬುಧವಾರ ತಿಳಿಸಿದೆ.

ಈ ಸಾಮಗ್ರಿಗಳನ್ನು ಮಂಗಳವಾರ ಶ್ರೀಲಂಕಾಕ್ಕೆ ತಲುಪಿಸಲಾಗಿದೆ. ಜೂನ್ ತಿಂಗಳಲ್ಲಿ ಚೀನಾವು ಸುಮಾರು ₹ 500 ಕೋಟಿ ಮೌಲ್ಯದ ವೈದ್ಯಕೀಯ ಸಾಮಗ್ರಿಗಳನ್ನು ಶ್ರೀಲಂಕಾಕ್ಕೆ ನೀಡಿತ್ತು. ಇದೇ ವಾರದಲ್ಲಿ 1 ಸಾವಿರ ಮೆಟ್ರಿಕ್ ಟನ್‌ನ ಅಕ್ಕಿಯನ್ನು ನೀಡಲಾಗಿತ್ತು ಎಂದೂ ಕಚೇರಿಯು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT