ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸ ಕೋವಿಡ್‌ ಪ್ರಕರಣ: 90 ಲಕ್ಷ ಜನರ ಪರೀಕ್ಷೆಗೆ ಆದೇಶ

Last Updated 15 ಅಕ್ಟೋಬರ್ 2020, 16:13 IST
ಅಕ್ಷರ ಗಾತ್ರ

ಬೀಜಿಂಗ್‌: ಚೀನಾದ ಉತ್ತರ ಭಾಗದಲ್ಲಿರುವ ಚಿಂಗ್‌ದಾವ್‌ ನಗರದಲ್ಲಿ ಮತ್ತೆ ಕೊರೊನಾ ಸೋಂಕು ವ್ಯಾಪಿಸಲು ಆರಂಭಿಸಿದ್ದು, 12 ಹೊಸ ಕೋವಿಡ್‌–19 ಪ್ರಕರಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ನಗರದ ಎಲ್ಲ 90 ಲಕ್ಷ ಜನರ ಕೋವಿಡ್‌ ಪರೀಕ್ಷೆಗೆ ಅಧಿಕಾರಿಗಳು ಆದೇಶಿಸಿದ್ದಾರೆ.

ಚೀನಾದಲ್ಲಿ ಎರಡು ತಿಂಗಳ ಬಳಿಕ ಮೊದಲ ಬಾರಿಗೆ ಸ್ಥಳೀಯವಾಗಿ ಕೋವಿಡ್‌–19 ಪ್ರಕರಣಗಳು ದಾಖಲಾಗಿದ್ದು, ಚಿಂಗ್‌ದಾವ್‌ ನಗರದ ಎದೆರೋಗ ಆಸ್ಪತ್ರೆ ಅಧ್ಯಕ್ಷ ಡೆಂಗ್‌ ಕೈ ಹಾಗೂ ಆರೋಗ್ಯ ಆಯೋಗದ ನಿರ್ದೇಶಕ ಸುಯಿ ಜೆನ್‌ಹುವಾ ಎಂಬುವವರನ್ನು ಅಮಾನತುಗೊಳಿಸಲಾಗಿ, ತನಿಖೆ ನಡೆಸಲಾಗುತ್ತಿದೆ ಎಂದು ಚಿಂಗ್‌ದಾವ್‌ ನಗರ ಆಡಳಿತದ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ತಿಳಿಸಲಾಗಿದೆ.

‘ಸೋಂಕಿತರೊಂದಿಗೆ ನಿಕಟ ಸಂಪರ್ಕದಲ್ಲಿದ್ದವರನ್ನು ಹಾಗೂ ಅವರ ಜೊತೆಗೆ ಸಂಪರ್ಕದಲ್ಲಿದ್ದವರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ’ ಎಂದು ಚಿಂಗ್‌ದಾವ್‌ ಆರೋಗ್ಯ ಇಲಾಖೆ ತಿಳಿಸಿದೆ. ಕಳೆದ 24 ಗಂಟೆಯಲ್ಲಿ ಚೀನಾದಲ್ಲಿ 11 ಹೊಸ ಕೋವಿಡ್‌ ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 10 ಜನರು ವಿದೇಶಗಳಿಂದ ಬಂದವರಾಗಿದ್ದಾರೆ ಎಂದು ರಾಷ್ಟ್ರೀಯ ಆರೋಗ್ಯ ಆಯೋಗ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT