ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತದ ವಿರುದ್ಧ ಆಕ್ರಮಣಕಾರಿಯಾಗಿದೆ ಚೀನಾ: ಅಮೆರಿಕ ರಾಜತಾಂತ್ರಿಕ ಅಧಿಕಾರಿ

Last Updated 21 ಅಕ್ಟೋಬರ್ 2021, 14:49 IST
ಅಕ್ಷರ ಗಾತ್ರ

ವಾಷಿಂಗ್ಟನ್‌ : ಹಿಮಾಲಯದ ಗಡಿಯಲ್ಲಿಚೀನಾವು ಭಾರತದ ವಿರುದ್ಧ ಆಕ್ರಮಣಕಾರಿಯಾಗಿದೆ ಎಂದು ಅಮೆರಿಕದ ಹಿರಿಯ ರಾಜತಾಂತ್ರಿಕ ಅಧಿಕಾರಿ ನಿಕೋಲಸ್ ಬರ್ನ್ಸ್ ಅಭಿಪ್ರಾಯಪಟ್ಟಿದ್ದಾರೆ.

ಅಮೆರಿಕದ ಸೆನೆಟ್‌ನವಿದೇಶಿ ವ್ಯವಹಾರಗಳ ಸಮಿತಿಯ ಸದಸ್ಯರೊಂದಿಗಿನ ಸಭೆಯಲ್ಲಿ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

‘ಚೀನಾ ಬೆದರಿಕೆ ತಂತ್ರಗಳನ್ನು ಅನುಸರಿಸಿದರೆ ಅಮೆರಿಕ ತನ್ನ ಮಿತ್ರರಾಷ್ಟ್ರದ ಪರವಾಗಿ ನಿಲ್ಲುತ್ತದೆ. ನಿಯಮಗಳ ಪ್ರಕಾರ ನಡೆದುಕೊಳ್ಳಲು ವಿಫಲವಾಗಿರುವ ಚೀನಾವನ್ನು ಹೊಣೆಗಾರನನ್ನಾಗಿ ಮಾಡಬೇಕು,’ ಎಂದು ನಿಕೋಲಸ್‌ ಹೇಳಿದ್ದಾರೆ.

ಅಮೆರಿಕದ ಮೌಲ್ಯಗಳು ಮತ್ತು ಹಿತಾಸಕ್ತಿಗಳಿಗೆ ವಿರುದ್ಧವಾದ ಕ್ರಮಗಳನ್ನು ಚೀನಾ ಕೈಗೊಂಡರೆ, ಅಮೆರಿಕ ಮತ್ತು ಮಿತ್ರರಾಷ್ಟ್ರಗಳ ಭದ್ರತೆಗೆ ಬೆದರಿಕೆ ಹಾಕಿದರೆ ಅಥವಾ ಅಂತರರಾಷ್ಟ್ರೀಯ ಗಡಿ ನಿಯಮಗಳನ್ನು ಉಲ್ಲಂಘಿಸಿದರೆಅಮೆರಿಕವು ಅಗತ್ಯ ಸಂದರ್ಭದಲ್ಲಿ ಚೀನಾಕ್ಕೆ ಸವಾಲೆಸೆಲೆಯಲಿದೆ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.

ನಿಕೋಲಸ್‌ ಬರ್ನ್ಸ್‌ ಅವರನ್ನು ಅಧ್ಯಕ್ಷ ಜೋ ಬೈಡನ್‌ ಅವರು ಚೀನಾಕ್ಕೆ ಅಮೆರಿಕದ ರಾಯಭಾರಿಯಾಗಿ ನಾಮ ನಿರ್ದೇಶನ ಮಾಡಿದ್ದಾರೆ. ‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT