ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೀನಾ ಬಾಹ್ಯಾಕಾಶ ನಿಲ್ದಾಣಕ್ಕೆ ಮೂವರು ಗಗನಯಾನಿಗಳ ರವಾನೆ

Last Updated 5 ಜೂನ್ 2022, 16:28 IST
ಅಕ್ಷರ ಗಾತ್ರ

ಬೀಜಿಂಗ್/ಜಿಯುಕ್ವಾನ್: ಪ್ರಸ್ತುತ ಭೂಮಿಯ ಸುತ್ತ ಸುತ್ತುತ್ತಿರುವ ಚೀನಾದ ಬಾಹ್ಯಾಕಾಶ ನಿಲ್ದಾಣದ ನಿರ್ಮಾಣವನ್ನು ಪೂರ್ಣಗೊಳಿಸಲು ಚೀನಾ ಭಾನುವಾರ ಆರು ತಿಂಗಳ ಕಾರ್ಯಾಚರಣೆಗೆ ಮೂವರು ಗಗನಯಾತ್ರಿಗಳನ್ನು ಕಳುಹಿಸಿದೆ.

ಗನಯಾತ್ರಿಗಳಾದ ಚೆನ್ ಡಾಂಗ್, ಲಿಯು ಯಾಂಗ್ ಮತ್ತು ಕೈ ಕ್ಸುಝೆ ಅವರನ್ನು ವಾಯುವ್ಯ ಚೀನಾದ ಜಿಯುಕ್ವಾನ್‌ನಲ್ಲಿರುವ ಉಪಗ್ರಹ ಉಡಾವಣಾ ಕೇಂದ್ರದಿಂದ ಶೆಂಝೌ-14 ನೌಕೆಯ ಮೂಲಕ ಬಾಹ್ಯಾಕಾಶಕ್ಕೆ ಕಳುಹಿಸಲಾಗಿದೆ.

ಈ ಮೂವರು ಟಿಯಾಂಗಾಂಗ್ ಬಾಹ್ಯಾಕಾಶ ನಿಲ್ದಾಣದ ಜೋಡಣೆ ಮತ್ತು ನಿರ್ಮಾಣವನ್ನು ಪೂರ್ಣಗೊಳಿಸಲು ಸ್ಥಳೀಯ ತಂಡದೊಂದಿಗೆ ಸಹಕರಿಸುತ್ತಾರೆ. ಇದನ್ನು ಏಕ-ಮಾಡ್ಯೂಲ್ ರಚನೆಯಿಂದ ಮೂರು ಮಾಡ್ಯೂಲ್‌ಗಳ ರಾಷ್ಟ್ರೀಯ ಬಾಹ್ಯಾಕಾಶ ಪ್ರಯೋಗಾಲಯವಾಗಿ ಅಭಿವೃದ್ಧಿಪಡಿಸುತ್ತಾರೆ ಎಂದು ಮೂಲಗಳು ತಿಳಿಸಿವೆ.

ಚರ್ಚ್‌ನಲ್ಲಿ ದಾಳಿ: ಹಲವರ ಸಾವು
ಅಬುಜಾ (ಎಪಿ):
ನೈರುತ್ಯ ನೈಜೀರಿಯಾದ ಒಂಡೋ ರಾಜ್ಯದ ಸೇಂಟ್‌ ಫ್ರಾನ್ಸಿಸ್‌ ಕ್ಯಾಥೋಲಿಕ್‌ ಚರ್ಚ್‌ನಲ್ಲಿ ಭಾನುವಾರ ಬಂದೂಕುಧಾರಿಗಳು ಗುಂಡಿನ ಮಳೆಗರೆದು, ಸ್ಫೋಟಕಗಳನ್ನು ಸ್ಫೋಟಿಸಿದ್ದರಿಂದ ಮಕ್ಕಳು ಸೇರಿ ಹತ್ತಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT