ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೀನಾದಿಂದ 3 ದೂರಸಂವೇದಿ ಉಪಗ್ರಹಗಳ ಉಡಾವಣೆ ಯಶಸ್ವಿ

Last Updated 23 ಜೂನ್ 2022, 14:14 IST
ಅಕ್ಷರ ಗಾತ್ರ

ಬೀಜಿಂಗ್: ಚೀನಾ ಗುರುವಾರ ನೈಋತ್ಯ ಭಾಗದ ಸಿಚುವಾನ್ ಪ್ರಾಂತ್ಯದಲ್ಲಿರುವ ಕ್ಸಿಚಾಂಗ್ ಉಪಗ್ರಹ ಉಡ್ಡಯನ ಕೇಂದ್ರದಿಂದ 3 ಹೊಸ ದೂರಸಂವೇದಿ ಉಪಗ್ರಹಗಳನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ.

ಯವೊಗಾನ್-35ಗೆ ಸೇರಿದ ಈ ಉಪಗ್ರಹಗಳನ್ನು ಗುರುವಾರ ಬೆಳಿಗ್ಗೆ 10.22 ಗಂಟೆಗೆ ಲಾಂಗ್ ಮಾರ್ಚ್-2ಡಿ ರಾಕೆಟ್‌ ಮೂಲಕ ಉಡಾವಣೆ ಮಾಡಲಾಗಿದ್ದು, ಯಶಸ್ವಿಯಾಗಿ ಕಕ್ಷೆಗೆ ಸೇರಿವೆ ಎಂದು ಸರ್ಕಾರಿ ಸ್ವಾಮ್ಯದ ಮಾಧ್ಯಮ ವರದಿ ಮಾಡಿದೆ.

ಈ ಉಪಗ್ರಹಗಳನ್ನು ಮುಖ್ಯವಾಗಿ ವಿಜ್ಞಾನ ಪ್ರಯೋಗಗಳು, ಭೂಮಿಯ ಸಂಪನ್ಮೂಲಗಳ ಸಮೀಕ್ಷೆ, ಕೃಷಿ ಉತ್ಪನ್ನಗಳು, ವಿಪತ್ತು ತಡೆ ಸೇರಿದಂತೆ ಇನ್ನಿತರ ಕಾರ್ಯಗಳಿಗಾಗಿ ಬಳಸಲಾಗುತ್ತದೆ ಎಂದು ವರದಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT