ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೀನಾ: ಬಾಲಾಪರಾಧಿಗಳ ವಯೋಮಿತಿ ಇಳಿಕೆ 

Last Updated 27 ಡಿಸೆಂಬರ್ 2020, 16:37 IST
ಅಕ್ಷರ ಗಾತ್ರ

ಬೀಜಿಂಗ್‌: ಬಾಲಾಪರಾಧವನ್ನು ತಡೆಗಟ್ಟುವ ನಿಟ್ಟಿನಲ್ಲಿ ಮತ್ತಷ್ಟು ಕಠಿಣ ಕ್ರಮ ಕೈಗೊಂಡಿರುವ ಚೀನಾ, ಬಾಲಾಪರಾಧಿಗಳ ವಯೋಮಿತಿಯನ್ನು 14ರಿಂದ 12ಕ್ಕೆ ಇಳಿಸಿದೆ.

ಈ ಸಂಬಂಧ ಕಾಯ್ದೆಗೆ ತಿದ್ದುಪಡಿ ತಂದಿದ್ದು, ನೂತನ ಕಾಯ್ದೆ ಮಾರ್ಚ್‌ನಿಂದ ಜಾರಿಗೆ ಬರಲಿದೆ. 12 ರಿಂದ 14 ವರ್ಷ ವಯೋಮಾನದ ಮಕ್ಕಳು ಕೆಲವೊಂದು ಅಪರಾಧಗಳಲ್ಲಿ ತೊಡಗಿದರೆ ಅವರಿಗೆ ಶಿಕ್ಷೆ ವಿಧಿಸಲು ತಿದ್ದುಪಡಿ ಕಾಯ್ದೆಯಲ್ಲಿ ಅವಕಾಶ ಇದೆ.

ಪ್ರಸ್ತುತ, ಚೀನಾದಲ್ಲಿ ಅಪರಾಧಿಗಳ ವಯೋಮಿತಿ 16 ವರ್ಷ. 14 ವರ್ಷದವರೆಗಿನ ಮಕ್ಕಳು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದರೆ ಅವರಿಗೆ ಶಿಕ್ಷೆಯಿಂದ ವಿನಾಯಿತಿ ನೀಡಿ, ತಪ್ಪನ್ನು ತಿದ್ದಿಕೊಳ್ಳಲು ಶಿಕ್ಷಣ ನೀಡಲಾಗುತ್ತಿದೆ. ಆದರೆ, ಕೆಲವು ನಿರ್ದಿಷ್ಟ ಗಂಭೀರ ಕ್ರಿಮಿನಲ್‌ ಅಪರಾಧಗಳನ್ನು ಎಸಗುವ14 ರಿಂದ 16 ವರ್ಷದೊಳಗಿನವರಿಗೆ ಶಿಕ್ಷಿಸಲು ಕಾನೂನಿನಲ್ಲಿ ಅವಕಾಶ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT