ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಡಿಯಲ್ಲಿ ಭಾರತ–ಅಮೆರಿಕ ನಡೆಸಲಿರುವ ಸಮರಾಭ್ಯಾಸಕ್ಕೆ ಚೀನಾ ವಿರೋಧ

Last Updated 25 ಆಗಸ್ಟ್ 2022, 15:59 IST
ಅಕ್ಷರ ಗಾತ್ರ

ಬೀಜಿಂಗ್‌: ಭಾರತ ಮತ್ತು ಅಮೆರಿಕ ಸೇನೆಯ ವಿಶೇಷ ಪಡೆಗಳು ಗಡಿ ನಿಯಂತ್ರಣ ರೇಖೆ (ಎಲ್‌ಎಸಿ) ಬಳಿ ಸಮರಾಭ್ಯಾಸ ನಡೆಸಲು ಉದ್ದೇಶಿಸಿದ್ದು, ಇದಕ್ಕೆ ಚೀನಾ ವಿರೋಧ ವ್ಯಕ್ತಪಡಿಸಿದೆ.

‘ಗಡಿ ಬಿಕ್ಕಟ್ಟಿನ ವಿಚಾರದಲ್ಲಿ ಮೂರನೇ ವ್ಯಕ್ತಿ ಮಧ್ಯಪ್ರವೇಶಿಸುವುದನ್ನು ನಾವು ವಿರೋಧಿಸುತ್ತೇವೆ. ದ್ವಿಪಕ್ಷೀಯ ಒಪ್ಪಂದದಂತೆ ಭಾರತವು ಎಲ್‌ಎಸಿ ಬಳಿ ಸಮರಾಭ್ಯಾಸ ನಡೆಸುವುದಿಲ್ಲ ಎಂಬ ಭರವಸೆ ಇದೆ’ ಎಂದು ಚೀನಾದ ರಕ್ಷಣಾ ಸಚಿವಾಲಯ ಗುರುವಾರ ಹೇಳಿದೆ.

‘ಚೀನಾ ಮತ್ತು ಭಾರತದ ನಡುವಣ ಗಡಿ ಬಿಕ್ಕಟ್ಟು ಉಭಯ ದೇಶಗಳಿಗೆ ಸಂಬಂಧಿಸಿದ್ದು. ದ್ವಿಪಕ್ಷೀಯ ಮಾತುಕತೆ ಮೂಲಕ ಈ ಸಮಸ್ಯೆಯನ್ನು ಪರಿಹರಿಸಿಕೊಳ್ಳಲು ಉಭಯ ರಾಷ್ಟ್ರಗಳು ಪ್ರಯತ್ನಿಸುತ್ತಿವೆ’ ಎಂದು ಚೀನಾದ ರಾಷ್ಟ್ರೀಯ ಭದ್ರತಾ ಸಚಿವಾಲಯದ ವಕ್ತಾರ ಟಾನ್‌ ಕೀಫೆ ತಿಳಿಸಿದ್ದಾರೆ.

ಭಾರತ ಮತ್ತು ಅಮೆರಿಕ ಸೇನಾಪಡೆಗಳ 18ನೇ ಆವೃತ್ತಿಯ ‘ಯುದ್ಧ ಅಭ್ಯಾಸ’ವನ್ನು ಅಕ್ಟೋಬರ್‌ 14ರಿಂದ 31ರವರೆಗೆ ನಡೆಸಲು ನಿರ್ಧರಿಸಲಾಗಿದೆ ಎಂದು ರಕ್ಷಣಾ ಸಚಿವಾಲಯದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT