ಬೀಜಿಂಗ್: ಚೀನಾದ ಈಶಾನ್ಯ ಭಾಗದ ಪ್ರಾಂತ್ಯಗಳಲ್ಲಿ ಕೊರೊನಾ ವೈರಸ್ ಸೋಂಕು ವ್ಯಾಪಕವಾಗುತ್ತಿದೆ. ಹೀಗಾಗಿ, ಜನರು ಪ್ರಯಾಣ ಮಾಡುವುದನ್ನು ತಪ್ಪಿಸುವ ಸಲುವಾಗಿ ವಿಮಾನ ಸಂಸ್ಥೆಗಳು ಪ್ರಯಾಣಿಕರಿಗೆ ಹಣ ಮರುಪಾವತಿ ಮಾಡುತ್ತಿವೆ.

ಮುಂದಿನ ತಿಂಗಳು ಚೀನಾದಲ್ಲಿ ಚಾಂದ್ರಮಾನ ಹೊಸ ವರ್ಷಾಚರಣೆ ನಡೆಯಲಿದ್ದು, ರಜೆಯೂ ಘೋಷಿಸಲಾಗುತ್ತದೆ. ಈ ಸಂದರ್ಭದಲ್ಲಿ ಭಾರಿ ಸಂಖ್ಯೆಯಲ್ಲಿ ಜನರು ಪ್ರವಾಸ ಕೈಗೊಳ್ಳುತ್ತಾರೆ. ಹೀಗಾಗಿ ಕೋವಿಡ್ ಪ್ರಸರಣಕ್ಕೆ ಕಡಿವಾಣ ಹಾಕುವ ದೃಷ್ಟಿಯಿಂದ ದೇಶದ ವಿಮಾನ ಸಂಸ್ಥೆಗಳು ಈ ಕ್ರಮಕ್ಕೆ ಮುಂದಾಗಿವೆ.

ದೇಶದಲ್ಲಿ ಕೋವಿಡ್–19 ಪ್ರಸರಣವನ್ನು ಗಮನಾರ್ಹವಾಗಿ ತಡೆ ಹಿಡಿಯಲಾಗಿದ್ದರೂ, ರಾಜಧಾನಿ ಬೀಜಿಂಗ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಹೊಸದಾಗಿ ಕೋವಿಡ್–19 ಪ್ರಕರಣಗಳು ವರದಿಯಾಗಿವೆ.

ಶಾಲೆಗಳಿಗೆ ಒಂದು ವಾರ ಕಾಲ ರಜೆ ನೀಡಲಾಗಿದ್ದರೆ, ವಲಸೆ ಕಾರ್ಮಿಕರಿಗೆ ತಮ್ಮ ಊರುಗಳಲ್ಲೇ ಇರುವಂತೆಯೂ ಸೂಚಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.