ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಹ ಪೈಲಟ್‌ನಿಂದ 132 ಮಂದಿಯಿದ್ದ ವಿಮಾನ ಪತನ?: ಈ ಬಗ್ಗೆ ಚೀನಾ ಸ್ಪಷ್ಟನೆ

Last Updated 12 ಏಪ್ರಿಲ್ 2022, 7:50 IST
ಅಕ್ಷರ ಗಾತ್ರ

ಬೀಜಿಂಗ್‌: ಚೀನಾದ ದಕ್ಷಿಣ ಭಾಗದ ಗುಡ್ಡಗಾಡು ಪ್ರದೇಶದಲ್ಲಿ 132 ಮಂದಿ ಪ್ರಯಾಣಿಕರನ್ನು ಹೊತ್ತಿದ್ದ ವಿಮಾನ ಪತನಗೊಂಡ ಘಟನೆಗೆ ಸಂಬಂಧಿಸಿ, 'ಸಹ ಪೈಲಟ್‌ನಿಂದ ದುರಂತ ಸಂಭವಿಸಿರಬಹುದು' ಎಂದು ಜಾಲತಾಣಗಳಲ್ಲಿ ಹರಡಿದ್ದ ವದಂತಿಯನ್ನು ಚೀನಾದ ವಿಮಾನಯಾನ ಪ್ರಾಧಿಕಾರ (ಸಿಎಎಸಿ) ಅಲ್ಲಗಳೆದಿದೆ.

ಘಟನೆ ಬಗ್ಗೆ ತನಿಖೆ ಮುಂದುವರಿದಿದೆ. ದುರಂತಕ್ಕೆ ಕಾರಣವೇನು ಮತ್ತು ಹೇಗೆ ಪತನಗೊಂಡಿತು ಎಂಬ ಬಗ್ಗೆ ಇನ್ನೂ ಅಂತಿಮ ತೀರ್ಮಾನ ಕೈಗೊಂಡಿಲ್ಲ ಎಂದು ಸಿಎಎಸಿ ಸ್ಪಷ್ಟನೆ ನೀಡಿದೆ.

'ಸಹ ಪೈಲಟ್‌ ವಿಮಾನ ಪತನಕ್ಕೆ ಕಾರಣವಾಗಿರಬಹುದು ಎಂಬ ಅಂಶ ಬ್ಲ್ಯಾಕ್ಸ್‌ಬಾಕ್ಸ್‌ನಿಂದ ಪತ್ತೆಯಾಗಿದೆ' ಎಂಬ ವದಂತಿ ಜಾಲತಾಣಗಳಲ್ಲಿ ಹರಡಿತ್ತು. 'ವಿಮಾನ ಹಾರಾಟಕ್ಕೂ ಮೊದಲು ಪೈಲಟ್‌ ಮತ್ತು ವಿಮಾನ ಸಿಬ್ಬಂದಿಯ ಮಾನಸಿಕ ಆರೋಗ್ಯ ತಪಾಸಣೆ ನಡೆಸಬೇಕು' ಎಂಬೆಲ್ಲ ಸಲಹೆಗಳು ಕೇಳಿಬಂದಿದ್ದವು ಎಂದು ಚೀನಾದ ಮಾಧ್ಯಮ ಗ್ಲೋಬಲ್‌ ಟೈಮ್ಸ್‌ ವರದಿ ಮಾಡಿದೆ.

'ಕೆಲವು ಸಾರ್ವಜನಿಕ ಭದ್ರತಾ ಸಂಸ್ಥೆಗಳ ಮೂಲದಿಂದ ತಪ್ಪು ಮಾಹಿತಿ ರವಾನೆಯಾಗಿದ್ದು, ವದಂತಿಗೆ ಕಾರಣವಾಗಿದೆ. ಇದು ಸಾರ್ವಜನಿಕ ಹಿತಾಸಕ್ತಿಯ ಉಲ್ಲಂಘನೆ. ತನಿಖೆ ಪ್ರಗತಿಯಲ್ಲಿದ್ದು ಶೀಘ್ರದಲ್ಲೇ ದುರಂತಕ್ಕೆ ಕಾರಣವೇನು ಎಂಬುದನ್ನು ತಿಳಿಸಲಾಗುವುದು' ಎಂದು ಸಿಎಎಸಿ ಹೇಳಿದೆ.

132 ಮಂದಿ ಪ್ರಯಾಣಿಸುತ್ತಿದ್ದ ಚೀನಾ ಈಸ್ಟರ್ನ್‌ ಏರ್‌ಲೈನ್ಸ್‌ನ ಬೋಯಿಂಗ್‌ 737-800 ವಿಮಾನವು ಮಾರ್ಚ್‌ 21ರಂದು ಪತನಗೊಂಡಿತ್ತು. ವಿಮಾನದಲ್ಲಿದ್ದ 9 ಮಂದಿ ಸಿಬ್ಬಂದಿ ಸೇರಿದಂತೆ ಎಲ್ಲರೂ ಮೃತಪಟ್ಟಿದ್ದರು. ನೈರುತ್ಯ ಚೀನಾದ ಯುನಾಗ್‌ ಪ್ರಾಂತ್ಯದ ರಾಜಧಾನಿ ಕುನ್‌ಮಿಂಗ್‌ನಿಂದ ಗುವಾಂಗ್‌ಡಾಂಗ್‌ ಪ್ರಾಂತ್ಯದ ರಾಜಧಾನಿ ಗುವಾಂಗ್‌ಝೌಗೆ ಈ ವಿಮಾನವು ಸಂಚರಿಸುತ್ತಿತ್ತು.

ವಿಮಾನವು ಆರು ವರ್ಷ ಹಳೆಯದಾಗಿತ್ತು. ಪತನಕ್ಕೆ ಮೊದಲು ಇದು 29,100 ಅಡಿ ಎತ್ತರದಲ್ಲಿ ಹಾರಾಡುತ್ತಿತ್ತು. ಎರಡು ನಿಮಿಷದಲ್ಲಿ ಅದು 9,075 ಅಡಿಗೆ ಕುಸಿಯಿತು. ಮತ್ತೆ 20 ಸೆಕೆಂಡ್‌ಗಳಲ್ಲಿ 3,225 ಅಡಿಗೆ ಇಳಿಯಿತು. ವಿಮಾನವು ಲಂಬವಾಗಿ ನೆಲಕ್ಕೆ ಅಪ್ಪಳಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT