ಶನಿವಾರ, ಡಿಸೆಂಬರ್ 4, 2021
20 °C

ಚೀನಾ: ಕಳೆದ 24 ಗಂಟೆಗಳಲ್ಲಿ 10 ಹೊಸ ಕೋವಿಡ್ ಪ್ರಕರಣ ದೃಢ, 31 ಜನರು ಗುಣಮುಖ

ಎಎನ್ಐ Updated:

ಅಕ್ಷರ ಗಾತ್ರ : | |

ಸಾಂದರ್ಭಿಕ ಚಿತ್ರ

ಬೀಜಿಂಗ್: ಕಳೆದ 24 ಗಂಟೆಗಳಲ್ಲಿ ಚೀನಾದಲ್ಲಿ 10 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು, ಅವೆಲ್ಲವೂ ಹೊರಗಿನಿಂದ ಬಂದವರಿಗೆ ತಗುಲಿದ್ದಾಗಿವೆ. ಇದೇ ವೇಳೆ 31 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ರಾಷ್ಟ್ರೀಯ ಆರೋಗ್ಯ ಆಯೋಗ ಮಂಗಳವಾರ ತಿಳಿಸಿದೆ.

ಚೀನಾದಲ್ಲಿ ಈವರೆಗೆ 85,058 ಜನರಿಗೆ ಸೋಂಕು ತಗುಲಿದ್ದು, 4,634 ಜನರು ಸಾವಿಗೀಡಾಗಿದ್ದಾರೆ. ಒಟ್ಟಾರೆ  2,509 ಜನರು ಹೊರಗಿನಿಂದ ಬಂದವರಾಗಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಚೀನಾದಲ್ಲಿ 34 ಸೋಂಕು ಲಕ್ಷಣಗಳಿಲ್ಲದ ಪ್ರಕರಣಗಳು ಪತ್ತೆಯಾಗಿದ್ದು, ಅವರೆಲ್ಲರೂ ಹೊರಗಿನಿಂದ ಬಂದವರಾಗಿದ್ದಾರೆ ಎಂದು ಆರೋಗ್ಯ ಆಯೋಗ ತಿಳಿಸಿದೆ.

ಕೋವಿಡ್ ಸೋಂಕಿನಿಂದ ಈವರೆಗೆ 80,200 ಕ್ಕಿಂತ ಹೆಚ್ಚಿನ ಜನರು ಚೇತರಿಸಿಕೊಂಡಿದ್ದಾರೆ. 200ಕ್ಕೂ ಹೆಚ್ಚಿನ ಜನರು ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಸೋಮವಾರವಷ್ಟೇ 17 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 24 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. ಭಾನುವಾರ ಹೊರಗಿನ 9 ಹೊಸ ಪ್ರಕರಣಗಳು ಪತ್ತೆಯಾಗಿವೆ ಮತ್ತು 27 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು