ಸೋಮವಾರ, ಜುಲೈ 4, 2022
24 °C

ಚೀನಾದಲ್ಲಿ ಹೊಸದಾಗಿ 1,227 ಪ್ರಕರಣ ಪತ್ತೆ

ರಾಯಿಟರ್ಸ್‌ Updated:

ಅಕ್ಷರ ಗಾತ್ರ : | |

Prajavani

ಬೀಜಿಂಗ್‌(ರಾಯಿಟರ್ಸ್‌): ಚೀನಾದಲ್ಲಿ ಭಾನುವಾರ 1,227 ಕೋವಿಡ್‌ ಪ್ರಕರಣಗಳು ದಾಖಲಾಗಿವೆ. ಇದರಲ್ಲಿ 151 ಲಕ್ಷಣ ಮತ್ತು 1,076 ಲಕ್ಷಣರಹಿತ ಪ್ರಕರಣಗಳಾಗಿವೆ ಎಂದು ಚೀನಾದ ರಾಷ್ಟ್ರೀಯ ಆರೋಗ್ಯ ಆಯೋಗವು ತಿಳಿಸಿದೆ.

ಶನಿವಾರ ವರದಿಯಾಗಿದ್ದ 1,789 ಪ್ರಕರಣಗಳಲ್ಲಿ 239 ಲಕ್ಷಣ ಮತ್ತು 1,550 ಲಕ್ಷಣ ರಹಿತವಾಗಿದ್ದವು. ನಾಲ್ಕು ಮಂದಿ ಮೃತಪಟ್ಟಿದ್ದು, ಒಟ್ಟು ಮೃತರ ಸಂಖ್ಯೆ 5,213ಕ್ಕೆ ಏರಿಕೆಯಾಗಿದೆ. ಇದುವರೆಗೆ 2,21,955 ಪ್ರಕರಣಗಳು ವರದಿಯಾಗಿವೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.

ಚೀನಾ ರಾಜಧಾನಿ ಬೀಜಿಂಗ್‌ನಲ್ಲಿ 39 ಲಕ್ಷಣ ಸಹಿತ ಮತ್ತು 15 ಲಕ್ಷಣ ರಹಿತ ಪ್ರಕರಣಗಳು ವರದಿಯಾಗಿವೆ. ಇದರ ಹಿಂದಿನ ದಿನ 33 ಪ್ರಕರಣಗಳು ವರದಿಯಾಗಿದ್ದವು ಎಂದು ಸರ್ಕಾರಿ ಸ್ವಾಮ್ಯದ ಮಾಧ್ಯಮ ವರದಿ ಮಾಡಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು