ವಾಷಿಂಗ್ಟನ್: ಚೀನಾ, ರಷ್ಯಾ ಮತ್ತು ಭಾರತದಂತಹ ರಾಷ್ಟ್ರಗಳು ಜಾಗತಿಕ ವಾಯುಮಾಲಿನ್ಯವನ್ನು ಹೆಚ್ಚಿಸುತ್ತಿವೆ ಎಂದು ಆರೋಪಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಈ ವಿಷಯದಲ್ಲಿ ಅಮೆರಿಕ ಉತ್ತಮವಾದ ಪರಿಸರ ಪೂರಕ ಕ್ರಮಗಳನ್ನು ಕೈಗೊಂಡಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಉತ್ತರ ಕ್ಯಾಲಿಫೋರ್ನಿಯಾದಲ್ಲಿ ಗುರುವಾರ ಆಯೋಜಿಸಿದ್ದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, ‘ನನ್ನ ಆಡಳಿತಾವಧಿಯಲ್ಲಿ ಅಮೆರಿಕ ಪರಿಸರವನ್ನು ಪರಿಶುದ್ಧವಾಗಿಟ್ಟುಕೊಳ್ಳುವುದರ ಜತೆಗೆ, ಇಂಧನ ಕ್ಷೇತ್ರದಲ್ಲಿ ಸ್ವಾವಲಂಬನೆ ಸಾಧಿಸಿದೆ’ ಎಂದು ಹೇಳಿದ್ದಾರೆ.

‘ನಾವು ಒಝೋನ್ ಪದರ ರಕ್ಷಣೆ ಸೇರಿದಂತೆ ಹಲವು ಪರಿಸರ ಸಂರಕ್ಷಣಾ ಕ್ರಮಗಳನ್ನು ಕೈಗೊಂಡಿದ್ದೇವೆ. ಇದೇ ವೇಳೆ ಚೀನಾ, ರಷ್ಯಾ ಮತ್ತು ಭಾರತದಂತಹ ರಾಷ್ಟ್ರಗಳು ವಾಯುಮಾಲಿನ್ಯ ಹೆಚ್ಚಿಸುತ್ತಿವೆ’ ಎಂದು ಅವರು ಆರೋಪಿಸಿದ್ದಾರೆ.

ಟ್ರಂಪ್, 2017ರಲ್ಲಿ ಜಾಗತಿಕ ತಾಪಮಾನ ಕಡಿಮೆಗೊಳಿಸುವ ಪ್ಯಾರಿಸ್ ಒಪ್ಪಂದದಿಂದ ಹಿಂದೆ ಸರಿಯುವುದಾಗಿ ಘೋಷಿಸಿದ್ದರು. ಈ ಒಪ್ಪಂದಕ್ಕೆ ಸಹಿ ಹಾಕಿದರೆ, ಅಮೆರಿಕಕ್ಕೆ ಆರ್ಥಿಕವಾಗಿ ಹಿನ್ನಡೆ ಉಂಟಾಗುತ್ತದೆ. ಕೋಟಿಗಟ್ಟಲೆ ಉದ್ಯೋಗಗಳನ್ನು ಕಳೆದುಕೊಳ್ಳಬೇಕಾಗುತ್ತದೆ. ತೈಲ, ಅನಿಲ ಹಾಗೂ ಕಲ್ಲಿದ್ದಲು ಉತ್ಪಾದನೆಯ ಕ್ಷೇತ್ರಗಳಲ್ಲಿ ಹಿನ್ನಡೆ ಸಾಧಿಸಬೇಕಾಗುತ್ತದೆ ಎಂದು ಕಾರಣ ನೀಡಿದ್ದರು.

ಈ ಪ್ಯಾರಿಸ್ ಒಪ್ಪಂದದ ಹೆಚ್ಚಿನ ಲಾಭ ಭಾರತ ಮತ್ತು ಚೀನಾ ರಾಷ್ಟ್ರಗಳಿಗೆ ದೊರೆಯುತ್ತದೆ. ಆದರೆ, ಈ ಒಪ್ಪಂದಿಂದ ಅಮೆರಿಕಕ್ಕೆ ಅನ್ಯಾಯವಾಗುತ್ತದೆ ಎಂಬುದು ಟ್ರಂಪ್ ವಾದ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.