ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಭಯ ಸೇನೆ ಹಿಂತೆಗೆತ ಪ್ರಕ್ರಿಯೆ ಸುಗಮ: ಚೀನಾ

Last Updated 18 ಫೆಬ್ರುವರಿ 2021, 13:41 IST
ಅಕ್ಷರ ಗಾತ್ರ

ಬೀಜಿಂಗ್‌: ‘ಪೂರ್ವ ಲಡಾಖ್‌ ಗಡಿ ಪ್ರದೇಶದಲ್ಲಿ ಚೀನಾ ಹಾಗೂ ಭಾರತೀಯ ಸೇನೆಯನ್ನು ವಾಪಸ್ ಕರೆಸಿಕೊಳ್ಳುವ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಉಭಯ ದೇಶಗಳು ಶಾಂತಿ ಮರುಸ್ಥಾಪನೆಗೆ ವ್ಯವಸ್ಥಿತ ಪಯತ್ನ ನಡೆಸುತ್ತಿವೆ’ ಎಂದು ಚೀನಾ ಗುರುವಾರ ತಿಳಿಸಿದೆ.

ಸೇನಾ ಮಾತುಕತೆಯ ಒಪ್ಪಂದದ ಭಾಗವಾಗಿ, ಚೀನಾ ಹಾಗೂ ಭಾರತೀಯ ಪಡೆಗಳು ಪ್ಯಾಂಗೊಂಗ್ ಸರೋವರ ಪ್ರದೇಶದಲ್ಲಿ ಏಕಕಾಲದಲ್ಲಿ ಮತ್ತು ವ್ಯವಸ್ಥಿತವಾಗಿ ಸೇನೆಯನ್ನು ಹಿಂಪಡೆದುಕೊಳ್ಳುವ ಪ್ರಕ್ರಿಯೆಯನ್ನು ಆರಂಭಿಸಿವೆ ಎಂದು ಚೀನಾದ ರಕ್ಷಣಾ ಸಚಿವಾಲಯದ ವಕ್ತಾರ ಇತ್ತೀಚೆಗೆ ತಿಳಿಸಿದ್ದರು.

ಸೇನೆಯನ್ನು ವಾಪಸ್ ಕರೆಸಿಕೊಳ್ಳುವ ಪ್ರಕ್ರಿಯೆ ಯಾವಾಗ ಪೂರ್ಣಗೊಳ್ಳಲಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ಈ ಕುರಿತು ನನಗೆ ಮಾಹಿತಿಯಿಲ್ಲ. ಸೇನಾ ಸಿಬ್ಬಂದಿಯನ್ನು ಪ್ರಶ್ನಿಸಿ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT