ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಆಕಸ್ಮಿಕ ದಾಳಿ ಬಗ್ಗೆ ಪಾಕ್-ಭಾರತ ಮಾತುಕತೆ ನಡೆಸಲಿ: ಚೀನಾ

Last Updated 14 ಮಾರ್ಚ್ 2022, 21:33 IST
ಅಕ್ಷರ ಗಾತ್ರ

ಬೀಜಿಂಗ್: ಆಕಸ್ಮಿಕವಾಗಿ ಭಾರತದ ಕ್ಷಿಪಣಿ ಪಾಕಿಸ್ತಾನದ ನೆಲಕ್ಕೆ ಅಪ್ಪಳಿಸಿದ ಘಟನೆಗೆ ಸಂಬಂಧಿಸಿದಂತೆ ಉಭಯ ದೇಶಗಳು ಶೀಘ್ರವೇ ಮಾತುಕತೆ ನಡೆಸಬೇಕು ಎಂದು ಚೀನಾ ಒತ್ತಾಯಿಸಿದೆ. ಅಲ್ಲದೆ ಈ ಘಟನೆ ಸಂಬಂಧ ವಸ್ತುನಿಷ್ಠ ತನಿಖೆ ನಡೆಯಬೇಕು ಎಂದು ಅದು ಹೇಳಿದೆ.

ಈ ಬಗ್ಗೆ ಸೋಮವಾರ ಮಾತನಾಡಿದ ಚೀನಾದ ವಿದೇಶಾಂಗ ಇಲಾಖೆ ವಕ್ತಾರ ಝಾವೊ ಲಿಜಿಯಾನ್, ದಕ್ಷಿಣ ಏಷ್ಯಾದಲ್ಲಿ ಪಾಕಿಸ್ತಾನ ಮತ್ತು ಭಾರತ ಮುಖ್ಯವಾದ ದೇಶಗಳಾಗಿವೆ. ಪ್ರಾಂತೀಯ ಭದ್ರತೆ ಮತ್ತು ಸ್ಥಿರತೆಯನ್ನು ಎತ್ತಿಹಿಡಿಯುವ ಜವಾಬ್ದಾರಿಯನ್ನು ಹೊಂದಿವೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT