ಬುಧವಾರ, ಮೇ 18, 2022
21 °C

ಕೋವಿಡ್‌: ಶಾಂಘೈನಲ್ಲಿ ಒಂದೇ ದಿನ 25,146 ಲಕ್ಷಣ ರಹಿತ ಹೊಸ ಪ್ರಕರಣ ಪತ್ತೆ

ರಾಯಿಟರ್ಸ್ Updated:

ಅಕ್ಷರ ಗಾತ್ರ : | |

ಬೀಜಿಂಗ್‌: ಚೀನಾದ ಅತಿದೊಡ್ಡ ನಗರ ಶಾಂಘೈನಲ್ಲಿ ಬುಧವಾರ ಒಂದೇ ದಿನ 25,146 ಲಕ್ಷಣ ರಹಿತ ಕೋವಿಡ್‌ ಹೊಸ ಪ್ರಕರಣಗಳು ವರದಿಯಾಗಿವೆ. 

ರೋಗ ಲಕ್ಷಣವಿರುವ ಪ್ರಕರಣಗಳಲ್ಲೂ ಏರಿಕೆ ಕಂಡುಬಂದಿದೆ. 24 ಗಂಟೆ ಅವಧಿಯಲ್ಲಿ 2,573  ರೋಗ ಲಕ್ಷಣವಿರುವ ಪ್ರಕರಣಗಳು ಪತ್ತೆಯಾಗಿವೆ ಎಂದು ಸ್ಥಳೀಯ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. 

ಚೀನಾದ ಇತರೆ ಪ್ರದೇಶಗಳಿಗೆ ಹೋಲಿಕೆ ಮಾಡಿದರೆ ವಾಣಿಜ್ಯ ನಗರಿ ಶಾಂಘೈನಲ್ಲಿ ಲಕ್ಷಣ ರಹಿತ ಪ್ರಕರಣಗಳು ಹೆಚ್ಚಾಗುತ್ತಿವೆ. ಇದರಿಂದ ಸೋಂಕಿತರು, ಸೌಮ್ಯ ಲಕ್ಷಣ ಮತ್ತು ಲಕ್ಷಣ ರಹಿತ ಪ್ರಕರಣಗಳ ಮಾಹಿತಿ ಅಸ್ಪಷ್ಟವಾಗಿದೆ ಎಂದು ವರದಿಯಾಗಿವೆ. 

ಕೋವಿಡ್‌ ಹರಡುವಿಕೆಯನ್ನು ನಿಯಂತ್ರಿಸಲು ಶಾಂಘೈನಲ್ಲಿ ವಿಧಿಸಲಾಗಿರುವ ಲಾಕ್‌ಡೌನ್‌ ಮೂರನೇ ವಾರಕ್ಕೆ ಕಾಲಿಟ್ಟಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು