ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಹ್ಯಾಕಾಶದ ಕಚಡಾ ನಿಗ್ರಹ: ಚೀನಾದಿಂದ ಉಪಗ್ರಹ ಉಡಾವಣೆ

Last Updated 24 ಅಕ್ಟೋಬರ್ 2021, 5:28 IST
ಅಕ್ಷರ ಗಾತ್ರ

ಬೀಜಿಂಗ್: ಬಾಹ್ಯಾಕಾಶದಲ್ಲಿರುವ ಕಚಡಾಗಳನ್ನು ತಗ್ಗಿಸುವ ತಂತ್ರಜ್ಞಾನವನ್ನು ಪರೀಕ್ಷಿಸುವ ಸಲುವಾಗಿಯೇ ಚೀನಾವು ಭಾನುವಾರ ಹೊಸ ಉಪಗ್ರಹವೊಂದನ್ನು ಯಶಸ್ವಿಯಾಗಿ ಬಾಹ್ಯಾಕಾಶಕ್ಕೆ ಉಡಾಯಿಸಿದೆ.

‘ಶಿಜಾನ್‌–21‘ ಹೆಸರಿನ ಈ ಉಪಗ್ರಹವನ್ನು ಹೊತ್ತ ರಾಕೆಟ್‌ ಭಾನುವಾರ ಸಿಚುವಾನ್ ಪ್ರಾಂತ್ಯದ ಶಿಚಾಂಗ್ ಉಪಗ್ರಹಣ ಉಡಾವಣಾ ಕೇಂದ್ರದಿಂದ ನಭಕ್ಕೆ ಚಿಮ್ಮಿತು. ಅದು ಯೋಜಿತ ಕಕ್ಷೆಗೆ ಉಪಗ್ರಹವನ್ನು ಯಶಸ್ವಿಯಾಗಿ ಸೇರಿಸಿದೆ ಎಂದು ಸರ್ಕಾರಿ ಸ್ವಾಮ್ಯದ ಕ್ಸಿನ್‌ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT