ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್: ಬ್ರಿಟನ್‌ ವಿಮಾನಗಳಿಗೆ ಅನಿರ್ದಿಷ್ಟಾವಧಿ ನಿರ್ಬಂಧ ಹೇರಲು ಚೀನಾ ನಿರ್ಧಾರ

Last Updated 24 ಡಿಸೆಂಬರ್ 2020, 9:31 IST
ಅಕ್ಷರ ಗಾತ್ರ

ಬೀಜಿಂಗ್: ಬ್ರಿಟನ್‌ಗೆ ತೆರಳುವ ಮತ್ತು ಅಲ್ಲಿಂದ ಬರುವ ವಿಮಾನಗಳಿಗೆ ಅನಿರ್ದಿಷ್ಟ ಅವಧಿಗೆ ನಿರ್ಬಂಧ ಹೇರುವುದಾಗಿ ಚೀನಾ ವಿದೇಶಾಂಗ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ. ಕೊರೊನಾ ವೈರಸ್‌ನ ಹೊಸ ಸ್ವರೂಪವು ವೇಗವಾಗಿ ಹರಡುತ್ತಿರುವ ಕಾರಣ ಈ ಕ್ರಮಕ್ಕೆ ಮುಂದಾಗಲಾಗಿದೆ.

‘ಸುದೀರ್ಘ ಚಿಂತನೆಯ ಬಳಿಕ ಬ್ರಿಟನ್‌ ವಿಮಾನಗಳಿಗೆ ನಿರ್ಬಂಧ ವಿಧಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ’ ಎಂದು ವಕ್ತಾರರು ಹೇಳಿದ್ದಾರೆ.

ಇತ್ತೀಚಿನ ಬೆಳವಣಿಗೆಗಳನ್ನು ಚೀನಾ ಸೂಕ್ಷ್ಮವಾಗಿ ಗಮನಿಸುತ್ತಿದೆ. ಪರಿಸ್ಥಿತಿಗೆ ಅನುಗುಣವಾಗಿ ನಿಯಂತ್ರಣಕ್ಕೆ ಬೇಕಾದ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಸೋಂಕು ಹರಡುವಿಕೆ ತೀವ್ರಗೊಳ್ಳುವ ಭೀತಿಯಿಂದ ವಿಶ್ವದ ಹೆಚ್ಚಿನ ರಾಷ್ಟ್ರಗಳು ಗಡಿ ಬಂದ್ ಮಾಡಲಾರಂಭಿಸಿವೆ. ಅಂತರರಾಷ್ಟ್ರೀಯ ವಿಮಾನ ಹಾರಾಟದ ಮೇಲೂ ನಿರ್ಬಂಧ ವಿಧಿಸಿವೆ.

ಯುರೋಪ್‌ನ ಎಲ್ಲ ರಾಷ್ಟ್ರಗಳು ಈಗಾಗಲೇ ಬ್ರಿಟನ್‌ಗೆ ವಿಮಾನ ಸಂಚಾರ ಸ್ಥಗಿತಗೊಳಿಸಿವೆ. ಭಾರತವೂ ಇದೇ 31ರ ವರೆಗೆ ಬ್ರಿಟನ್‌ಗೆ ತೆರಳುವ ಮತ್ತು ಅಲ್ಲಿಂದ ಬರುವ ವಿಮಾನಗಳ ಸಂಚಾರ ರದ್ದುಪಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT