ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಷ್ಯಾ –ಉಕ್ರೇನ್‌ ಬಿಕ್ಕಟ್ಟು: ತನ್ನ ಪ್ರಜೆಗಳಿಗೆ ಸುರಕ್ಷಿತವಾಗಿರಲು ಚೀನಾ ಸೂಚನೆ

Last Updated 22 ಫೆಬ್ರುವರಿ 2022, 2:14 IST
ಅಕ್ಷರ ಗಾತ್ರ

ಬೀಜಿಂಗ್: ಉಕ್ರೇನ್ ಮೇಲೆ ರಷ್ಯಾದ ಸಂಭವನೀಯ ಆಕ್ರಮಣ ಭೀತಿ ಹಿನ್ನೆಲೆಯಲ್ಲಿ ತನ್ನ ಪ್ರಜೆಗಳು ಎಚ್ಚರಿಕೆಯಿಂದ ಇರುವಂತೆ ಚೀನಾ ಸೂಚನೆ ನೀಡಿದೆ.

ಆತಂಕವಿರುವ ಪ್ರದೇಶಗಳಲ್ಲಿ ನೆಲೆಸಿರುವ ತನ್ನ ಪ್ರಜೆಗಳು ಕೂಡಲೇ ಚೀನಾಕ್ಕೆ ಹಿಂದಿರುಗಬೇಕು ಎಂದು ಉಕ್ರೇನ್‌ನಲ್ಲಿರುವ ಚೀನಾ ರಾಯಭಾರ ಕಚೇರಿಯು ಸೋಮವಾರ ಹೇಳಿದೆ.

ಪ್ರಸ್ತುತ, ಪೂರ್ವ ಉಕ್ರೇನ್‌ನಲ್ಲಿನ ಪರಿಸ್ಥಿತಿಯು ಪ್ರಮುಖ ಬದಲಾವಣೆಗಳಿಗೆ ಕಾರಣವಾಗಿದೆ ಎಂದು ಚೀನಾ ರಾಯಭಾರ ಕಚೇರಿ ತನ್ನ ವೆಬ್‌ಸೈಟ್‌ನಲ್ಲಿ ಹೇಳಿಕೆ ಪ್ರಕಟಿಸಿದೆ.

ಸ್ಥಳೀಯ ಬೆಳವಣಿಗಳಿಗೆ ಅನುಗುಣವಾಗಿ ಸುರಕ್ಷಿತ ನಿಯಮಗಳನ್ನು ಪಾಲಿಸುವಂತೆ ಚೀನಾ ತನ್ನ ಪ್ರಜೆಗಳಿಗೆ ಸೂಚಿಸಿದೆ. ಜತೆಗೆ ರಾಯಭಾರ ಕಚೇರಿಯು ಎಂದಿನಂತೆ ಕಾರ್ಯನಿರ್ವಹಿಸುವಂತೆಯೂ ಹೇಳಿದೆ.

ರಷ್ಯಾ – ಉಕ್ರೇನ್ ಬಿಕ್ಕಟ್ಟಿಗೆ ಸಂಬಂಧಿಸಿ ಅಮೆರಿಕದ ಮಧ್ಯಸ್ಥಿಕೆ ವಹಿಸುತ್ತಿರುವುದನ್ನು ಟೀಕಿಸಿರುವ ಚೀನಾ, ಅಮೆರಿಕದಿಂದಾಗಿ ಯುದ್ಧ ಬೆದರಿಕೆ ಮುನ್ನೆಲೆಗೆ ಬಂದಿದೆ ಎಂದು ಕಿಡಿಕಾರಿದೆ.

ಅಮೆರಿಕ, ಬ್ರಿಟನ್, ಜರ್ಮನಿ, ಭಾರತ ಸೇರಿದಂತೆ ಅನೇಕ ರಾಷ್ಟ್ರಗಳು ತಮ್ಮ ಪ್ರಜೆಗಳಿಗೆ ಉಕ್ರೇನ್ ತೊರೆಯುವಂತೆ ಈಗಾಗಲೇ ಸೂಚನೆ ನೀಡಿವೆ.

ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಅವರು ಸೋಮವಾರ ರಾಷ್ಟ್ರೀಯ ಭದ್ರತಾ ಮಂಡಳಿ ಸಭೆ ನಡೆಸಿದ್ದರು. ಈ ವೇಳೆ ಅವರು ಪಾಶ್ಚಾತ್ಯ ಶಕ್ತಿಗಳು ರಷ್ಯಾದ ಭದ್ರತೆಗೆ ಬೆದರಿಕೆಯೊಡ್ಡಲು ಉಕ್ರೇನ್‌ ಅನ್ನು ಸಾಧನವಾಗಿ ಬಳಸಿಕೊಳ್ಳುತ್ತಿವೆ ಎಂದು ಆರೋಪಿಸಿದ್ದರು.

ಉಕ್ರೇನ್‌ನ ಬಂಡುಕೋರರ ಹಿಡಿತದಲ್ಲಿರುವ ಎರಡು ಪ್ರದೇಶಗಳನ್ನು ಸ್ವತಂತ್ರ ಎಂದು ಪರಿಗಣಿಸುವ ನಿಟ್ಟಿನಲ್ಲಿ ಚಿಂತನೆ ನಡೆಸುವುದಾಗಿಯೂ ಪುಟಿನ್‌ ಇದೇ ವೇಳೆ ಪ್ರಕಟಿಸಿದ್ದರು.

ಪೂರ್ವ ಉಕ್ರೇನ್‌ನ ಡೊನೆಟ್‌ಸ್ಕ್‌ ಮತ್ತು ಲುಗಾನ್‌ಸ್ಕ್‌ನ ಪ್ರತ್ಯೇಕತಾವಾದಿ ಪ್ರದೇಶಗಳನ್ನು ಬಹಿರಂಗವಾಗಿ ಬೆಂಬಲಿಸುವ ರಷ್ಯಾ ನಿರ್ಧಾರವು ಪರಿಸ್ಥಿತಿಯನ್ನು ಮತ್ತಷ್ಟು ಕಗ್ಗಂಟಾಗಿಸುವ ಸಾಧ್ಯತೆಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT