ಶನಿವಾರ, ಜೂನ್ 19, 2021
27 °C

ಚೀನಾ: ಗುವಾಂಗ್‌ಜೌನ ಎರಡು ಪ್ರದೇಶಗಳಲ್ಲಿ ಲಾಕ್‌ಡೌನ್‌

ಎಪಿ Updated:

ಅಕ್ಷರ ಗಾತ್ರ : | |

Prajavani

ಬೀಜಿಂಗ್‌: ಚೀನಾದ ಗುವಾಂಗ್‌ಜೌನಲ್ಲಿ ಕೋವಿಡ್‌ ಪ್ರಕರಣಗಳು ಉಲ್ಬಣಗೊಳ್ಳುತ್ತಿವೆ. ಈ ಹಿನ್ನೆಲೆಯಲ್ಲಿ ಇಲ್ಲಿನ ಎರಡು ಪ್ರದೇಶಗಳಿಗೆ ಮಂಗಳವಾರ ಲಾಕ್‌ಡೌನ್‌ ಹೇರಲಾಗಿದೆ.

ಗುವಾಂಗ್‌ಜೌ ನಗರದಲ್ಲಿ ಮತ್ತೆ 11 ಪ್ರಕರಣಗಳು ಪತ್ತೆಯಾಗಿವೆ. ಹಾಗಾಗಿ ಇಲ್ಲಿನ ಎರಡು ಪ್ರದೇಶಗಳಿಗೆ ಲಾಕ್‌ಡೌನ್‌ ಹೇರಲಾಗಿದೆ.

ಸಮೀಪದ ಗ್ವಾಂಗ್‌ಡಂಗ್ ಪ್ರಾಂತ್ಯದಲ್ಲಿ ಸಹ ಕಟ್ಟುನಿಟ್ಟಿನ ಕೋವಿಡ್‌ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗಿದೆ.  ಚೀನಾದ ಇತರೆ ಸ್ಥಳಗಳಿಗೆ ಪ್ರಯಾಣಿಸಲು ಬಯಸುವವರಿಗೆ ನೆಗೆಟಿವ್‌ ವರದಿ ಕಡ್ಡಾಯಗೊಳಿಸಲಾಗಿದೆ.

ಇತ್ತೀಚಿಗೆ ಗುವಾಂಗ್‌ಜೌನಲ್ಲಿ 30 ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ. 15 ಲಕ್ಷ ಜನಸಂಖ್ಯೆ ಇರುವ ಈ ಪ್ರಾಂತ್ಯದಲ್ಲಿ ಎಷ್ಟು ಮಂದಿಗೆ ಕೋವಿಡ್ ತಗುಲಿದೆ ಎಂಬ ಮಾಹಿತಿ ಲಭಿಸಿಲ್ಲ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು