ಬೀಜಿಂಗ್: ಭಾರತದಲ್ಲಿ ಮಾರ್ಚ್ 2ರಂದು ನಡೆಯಲಿರುವ ಜಿ–20 ರಾಷ್ಟ್ರಗಳ ವಿದೇಶಾಂಗ ಸಚಿವರ ಸಭೆಯಲ್ಲಿ ಸಚಿವ ಕಿನ್ ಗಾಂಗ್ ಪಾಲ್ಗೊಳ್ಳುವರು ಎಂದು ಚೀನಾ ವಿದೇಶಾಂಗ ಸಚಿವಾಲಯ ಮಂಗಳವಾರ ತಿಳಿಸಿದೆ.
‘ದೇಶಗಳ ನಡುವಿನ ದ್ವಿಪಕ್ಷೀಯ ಬಾಂಧವ್ಯ ವೃದ್ಧಿ, ಆಹಾರ ಮತ್ತು ಇಂಧನ ಕ್ಷೇತ್ರಗಳಲ್ಲಿ ಭದ್ರತೆ ಹಾಗೂ ಅಭಿವೃದ್ಧಿಯಲ್ಲಿ ಸಹಕಾರವನ್ನು ಖಾತ್ರಿಪಡಿಸಲು ಚೀನಾ ಇತರ ದೇಶಗಳೊಂದಿಗೆ ಕಾರ್ಯ ನಿರ್ವಹಿಸಲು ಸಿದ್ಧ ಎಂಬ ಸಂದೇಶ ರವಾನಿಸಲು ಈ ಭೇಟಿ ನೆರವಾಗಲಿದೆ’ ಎಂದು ಸಚಿವಾಲಯ ಹೇಳಿದೆ.
‘ಅಂತರರಾಷ್ಟ್ರೀಯ ಸಹಕಾರಕ್ಕಾಗಿ ರಚಿಸಲಾಗಿರುವ ವೇದಿಕೆಯೇ ಜಿ–20. ಜಾಗತಿಕ ಆರ್ಥಿಕತೆ ಹಾಗೂ ಅಭಿವೃದ್ಧಿಗೆ ಎದುರಾಗಿರುವ ಸವಾಲುಗಳ ಬಗ್ಗೆ ಜಿ–20 ವಿದೇಶಾಂಗ ಸಚಿವರ ಸಭೆ ಚರ್ಚಿಸಲಿದೆ. ವಿಶ್ವದ ಆರ್ಥಿಕತೆಯ ಪುನಶ್ಚೇತನಕ್ಕೆ ಸಂಬಂಧಿಸಿ ಈ ಗುಂಪು ಮಹತ್ವದ ಪಾತ್ರ ವಹಿಸಲಿದೆ’ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಮಾವೊ ನಿಂಗ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.