ಬೀಜಿಂಗ್: ಎರಡು ವರ್ಷಗಳ ಬಳಿಕ ವಿದೇಶ ಪ್ರಯಾಣ ಹೊರಟಿರುವ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್, ಈ ವಾರ ಕಜಕಿಸ್ತಾನಕ್ಕೆ ಭೇಟಿ ನೀಡಿ, ಬಳಿಕ ಉಜ್ಬೇಕಿಸ್ತಾನದಲ್ಲಿ ನಡೆಯಲಿರುವ ಶಾಂಘೈ ಸಹಕಾರ ಸಂಘಟನೆಯ (ಎಸ್‌ಸಿಒ) 22ನೇ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಚೀನಾ ಅಧಿಕೃತವಾಗಿ ಸೋಮವಾರ ಘೋಷಿಸಿದೆ.

ಷಿ ಅವರು ಸಮರ್ಕಂಡ್ ನಗರದಲ್ಲಿ ನಡೆಯುವ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸೆ. 14 ರಿಂದ 16 ರವರೆಗೆ ಕಜಕಿಸ್ತಾನ ಮತ್ತು ಉಜ್ಬೇಕಿಸ್ತಾನಕ್ಕೆ ಭೇಟಿ ನೀಡುವರು ಎಂದು ಚೀನಾ ವಿದೇಶಾಂಗ ಸಚಿವಾಲಯದ ವಕ್ತಾರ ಹುವಾ ಚುನ್ಯಿಂಗ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಶೃಂಗಸಭೆಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾಗವಹಿಸುವ ನಿರೀಕ್ಷೆಯಿದೆ. ಪುಟಿನ್ ಮತ್ತು ಷಿ ಅವರು ಸಮರ್ಕಂಡ್‌ನಲ್ಲಿ ನಡೆಯುವ ಸಭೆಯಲ್ಲಿ ಭೇಟಿಯಾಗಲಿದ್ದಾರೆ ಎಂದುರಷ್ಯಾ ಅಧಿಕಾರಿಗಳು ಹೇಳಿದ್ದಾರೆ.ಈ ವರ್ಷದ ಫೆಬ್ರವರಿಯಲ್ಲಿ ರಷ್ಯಾ, ಉಕ್ರೇನ್ ಮೇಲೆ ದಾಳಿ ಮಾಡಿದ ನಂತರ ಇದು ಮೊದಲ ಭೇಟಿಯಾಗಲಿದೆ.

ಮೋದಿ ಸಹ ಶೃಂಗಸಭೆಯಲ್ಲಿ ಭಾಗವಹಿಸಲು ಸೆ.15-16 ರಂದು ಉಜ್ಬೇಕಿಸ್ತಾನ್‌ಗೆ ಭೇಟಿ ನೀಡಲಿದ್ದು, ದ್ವಿಪಕ್ಷೀಯ ಸಭೆ ನಡೆಸುವ ಸಾಧ್ಯತೆಯಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.