ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಾಲಿಬಾನ್‌ನಿಂದ ಮಹಿಳೆಯರ ಶಿಕ್ಷಣ, ಉದ್ಯೋಗಕ್ಕೆ ನಿರ್ಬಂಧ: ವಿಶ್ವಸಂಸ್ಥೆ ಖಂಡನೆ

Last Updated 29 ಡಿಸೆಂಬರ್ 2022, 5:45 IST
ಅಕ್ಷರ ಗಾತ್ರ

ವಿಶ್ವಸಂಸ್ಥೆ: ವಿಶ್ವವಿದ್ಯಾಲಯಗಳಿಗೆ ಪ್ರವೇಶ ಮಾಡದಂತೆ ಹಾಗೂ ಸರ್ಕಾರೇತರ ಸಂಸ್ಥೆಗಳಲ್ಲಿ ಉದ್ಯೋಗ ಮಾಡದಂತೆ ಮಹಿಳೆಯರಿಗೆ ನಿರ್ಬಂಧ ಹೇರಿರುವ ತಾಲಿಬಾನ್‌ನ ನಿರ್ಧಾರವನ್ನು ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯು ಖಂಡಿಸಿದೆ.

ಭದ್ರತಾ ಮಂಡಳಿಯ ಡಿಸೆಂಬರ್‌ ತಿಂಗಳ ಅಧ್ಯಕ್ಷತೆಯನ್ನು ಭಾರತವು ವಹಿಸಿಕೊಂಡಿದೆ.

‘ಇಂಥ ನಿರ್ಧಾರಗಳು ಮಾನವಹಕ್ಕುಗಳ ಗೌರವವನ್ನು ಕಡಿಮೆಗೊಳಿಸುತ್ತವೆ ಮತ್ತು‘ಹೆಚ್ಚು ಅಪಾಯಕಾರಿ’ ಎಂದು ವಿಶ್ವಸಂಸ್ಥೆಯಲ್ಲಿ ಭಾರತದ ರಾಯಭಾರಿ ಮತ್ತು ಭದ್ರತಾ ಮಂಡಳಿಯ ಅಧ್ಯಕ್ಷೆ ರುಚಿರಾ ಕಾಂಬೋಜ್‌ ಹೇಳಿದ್ದಾರೆ.

‘ಅಫ್ಗಾನಿಸ್ತಾನದ ಅಧಿಕಾರ ಹಿಡಿಯುವ ಸಂದರ್ಭದಲ್ಲಿ ಅಲ್ಲಿನ ಜನರಿಗೆ ತಾನೇ ನೀಡಿದ್ದ ಭರವಸೆಯ ಆಶಯಕ್ಕೆ ತದ್ವಿರುದ್ಧವಾದ ನಿರ್ಧಾರವನ್ನು ತಾಲಿಬಾನ್‌ ಕೈಗೊಂಡಿದೆ. ಈ ಮೂಲಕ ಅಫ್ಗಾನಿಸ್ತಾನದ ಜನರಿಗೆ ಹಾಗೂ ಅಂತರರಾಷ್ಟ್ರೀಯ ಸಮುದಾಯದ ನಂಬಿಕೆಗೆ ವಿರುದ್ಧವಾಗಿ ತಾಲಿಬಾನ್‌ ನಡೆದುಕೊಂಡಿದೆ’ ಎಂದು ಭದ್ರತಾ ಮಂಡಳಿ ಅಭಿಪ್ರಾಯಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT