ಬುಧವಾರ, ಆಗಸ್ಟ್ 10, 2022
24 °C

Covid-19 World Update: ಜಗತ್ತಿನಾದ್ಯಂತ 7.28 ಕೋಟಿಗೂ ಅಧಿಕ ಪ್ರಕರಣಗಳು

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ಕೋವಿಡ್–19 ಲಸಿಕೆ–ಸಾಂದರ್ಭಿಕ ಚಿತ್ರ

ವಾಷಿಂಗ್ಟನ್‌: ಜಗತ್ತಿನಾದ್ಯಂತ 5.10 ಕೋಟಿಗೂ ಹೆಚ್ಚು ಜನರು ಕೋವಿಡ್‌–19ನಿಂದ ಗುಣಮುಖರಾಗಿದ್ದಾರೆ. ಪ್ರಸ್ತುತ 2.01 ಕೋಟಿಗೂ ಅಧಿಕ ಸಕ್ರಿಯ ಪ್ರಕರಣಗಳಿವೆ.

ಈವರೆಗೂ ಕೋವಿಡ್‌–19 ದೃಢಪಟ್ಟ 7.28 ಕೋಟಿಗೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 16,22,567 ಮಂದಿ ಮೃತಪಟ್ಟಿದ್ದಾರೆ. 1 ಲಕ್ಷಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರವಾಗಿದೆ.

ಅಮೆರಿಕದಲ್ಲಿ ಜಗತ್ತಿನಲ್ಲೇ ಅತಿ ಹೆಚ್ಚು 1.67 ಕೋಟಿಗೂ ಅಧಿಕ  ಪ್ರಕರಣಗಳು ದಾಖಲಾಗಿದ್ದು, 97.27 ಲಕ್ಷ ಮಂದಿ ಗುಣಮುಖರಾಗಿದ್ದಾರೆ ಹಾಗೂ 3.06 ಲಕ್ಷ ಮಂದಿ ಸಾವಿಗೀಡಾಗಿದ್ದಾರೆ. ಪ್ರಸ್ತುತ 67.18 ಲಕ್ಷ ಸಕ್ರಿಯ ಪ್ರಕರಣಗಳಿವೆ.

ಬ್ರೆಜಿಲ್‌ನಲ್ಲಿ 7.39 ಲಕ್ಷ ಸಕ್ರಿಯ ಪ್ರಕರಣಗಳು, ರಷ್ಯಾದಲ್ಲಿ 5.09 ಲಕ್ಷ, ಭಾರತದಲ್ಲಿ 3.42 ಲಕ್ಷ, ಫ್ರಾನ್ಸ್‌ನಲ್ಲಿ 21.41 ಲಕ್ಷ ಸಕ್ರಿಯ ಪ್ರಕರಣಗಳಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು