ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 World Update: ಒಂದೇ ದಿನ 4.49 ಲಕ್ಷ ಜನರಿಗೆ ಸೋಂಕು, 9,847 ಜನ ಸಾವು

Last Updated 17 ಮಾರ್ಚ್ 2021, 7:13 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ಕಳೆದ 24 ಗಂಟೆಗಳಲ್ಲಿ ಪ್ರಪಂಚದಾದ್ಯಂತ ಬರೋಬ್ಬರಿ 4,49,180 ಕೋವಿಡ್-19 ಪ್ರಕರಣಗಳು ವರದಿಯಾಗಿವೆ. ಇದೇ ವೇಳೆ 9,847 ಸೋಂಕಿತರು ಮೃತಪಟ್ಟಿದ್ದಾರೆ ಎಂದು ವರ್ಲ್ಡೋಮೀಟರ್‌ ವೆಬ್‌ಸೈಟ್‌ ಬುಧವಾರ ವರದಿ ಮಾಡಿದೆ.

ಜಗತ್ತಿನಾದ್ಯಂತ ಇದುವರೆಗೆ ಒಟ್ಟು 12.12 (12,12,78,482) ಕೋಟಿಗೂ ಅಧಿಕ ಜನರಿಗೆ ಕೋವಿಡ್‌–19 ಸೋಂಕು ತಗುಲಿದೆ. ಇದರಲ್ಲಿ 9.78 (9,78,17,867) ಕೋಟಿ ಸೋಂಕಿತರು ಗುಣಮುಖರಾಗಿದ್ದು, 26.82 ಲಕ್ಷ ಮಂದಿ ಮೃತಪಟ್ಟಿದ್ದಾರೆ.

ಒಟ್ಟಾರೆ 2.07 ಕೋಟಿಗೂ ಅಧಿಕ ಸಕ್ರಿಯ ಪ್ರಕರಣಗಳಿದ್ದು, ಇದರಲ್ಲಿ 88,649 ಜನರ ಸ್ಥಿತಿ ಗಂಭೀರವಾಗಿದೆ.
ಅತಿಹೆಚ್ಚು ಸೋಂಕಿತರನ್ನು ಹೊಂದಿರುವ ಅಮೆರಿಕದಲ್ಲಿ ಈವರೆಗೆ ಒಟ್ಟು 3,02,31,550 ಪ್ರಕರಣಗಳು ದಾಖಲಾಗಿದ್ದು, 5,49,367 ಜನರು ಮೃತಪಟ್ಟಿದ್ದಾರೆ.

ಅಮೆರಿಕದ ನಂತರದ ಸ್ಥಾನದಲ್ಲಿರುವ ಬ್ರೆಜಿಲ್‌ನಲ್ಲಿ 1.16 ಕೋಟಿ ಪ್ರಕರಣಗಳು ವರದಿಯಾಗಿವೆ. ಉಳಿದಂತೆ ಸೋಂಕು ಪ್ರಕರಣಗಳ ಸಂಖ್ಯೆ ಭಾರತದಲ್ಲಿ 1.14 ಕೋಟಿ, ರಷ್ಯಾದಲ್ಲಿ 44 ಲಕ್ಷ, ಫ್ರಾನ್ಸ್‌ನಲ್ಲಿ 41.08 ಲಕ್ಷ ಮತ್ತು ಸ್ಪೇನ್‌ನಲ್ಲಿ 32 ಲಕ್ಷಕ್ಕೆ ಏರಿಕೆಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT